ಅಪಾರ ಬೆಂಬಲಿಗರ ಜೊತೆ ರೇವಣ್ಣ ಬಿಜೆಪಿಗೆ ಸೇರ್ಪಡೆ
ತಾಲೂಕಿನ ಹೆಸರಾಂತ ವೈದ್ಯ ಡಾ. ರೇವಣ್ಣ ಬಿಜೆಪಿಗೆ ಸೋಮವಾರ ಅಧಿಕೃತವಾಗಿ ಸೇರ್ಪಡೆಯಾದರು.
ಟಿ. ನರಸೀಪುರ : ತಾಲೂಕಿನ ಹೆಸರಾಂತ ವೈದ್ಯ ಡಾ. ರೇವಣ್ಣ ಬಿಜೆಪಿಗೆ ಸೋಮವಾರ ಅಧಿಕೃತವಾಗಿ ಸೇರ್ಪಡೆಯಾದರು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾಲ್ ಕಟೀಲ್… ಅವರ ನೇತೃತ್ವದಲ್ಲಿ ತಮ್ಮ ಅಪಾರ ಬೆಂಬಲಿಗರ ಜೊತೆ ಬಿಜೆಪಿಗೆ ಸೇರ್ಪಡೆಯಾದರು.
ಬಿಜೆಪಿಗೆ ಸೇರ್ಪಡೆಯಾಗಿ ಮಾತನಾಡಿದ ಅವರು, ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಇಂದಿನಿಂದ ಪಕ್ಷ ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸುತ್ತೇನೆ, ಟಿ. ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ನಾನು ಕೂಡ ಪ್ರಬಲ ಆಕಾಂಕ್ಷಿ ಎಂದರು.
ಕೇಂದ್ರ ಸಚಿವ ಭಗವಂತ ಕೂಬಾ, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್, ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಮಂಗಳ ಸೋಮಶೇಖರ್, ಟಿ. ನರಸೀಪುರ ಮಂಡಲ ಅಧ್ಯಕ್ಷ ಲೋಕೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಲೋಕೇಶ್‌ಗೌಡ, ಉದ್ಯಮಿ ಎಸ್‌ಎಂಆರ್ ಪ್ರಕಾಶ್, ಮೈಸೂರು ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆಬ್ಬೆಹುಂಡಿ ಶಿವಕುಮಾರ್, ಯುವ ಮೋರ್ಚಾ ಅಧ್ಯಕ್ಷ ಶಿವಶಂಕರ್, ಉಪಾಧ್ಯಕ್ಷ ಸಿ.ಬಿ. ಸಿದ್ದೇಶ್, ಯೋಗೇಶ್ ಇದ್ದರು.
ಕೈ ವಿರುದ್ಧ ಬಿಜೆಪಿಯಿಂದ ಸ್ಪರ್ಧೇ ಇದೆ
ಬಾಗಲಕೋಟೆ (ಏ.01): ಸಮೀಕ್ಷೆಗಳು ದಿನದಿಂದ ದಿನಕ್ಕೆ ಬದಲಾವಣೆಗಳು ಆಗುತ್ತಿರುತ್ತವೆ. ಹೀಗೆ ಉಳಿಯುತ್ತದೆ ಅಂತ ಹೇಳಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನವನಗರದ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯಲ್ಲಿ ಬಿಜೆಪಿಗೆ ಹಿನ್ನಡೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿಜಯ ಸಂಕಲ್ಪ ಯಾತ್ರೆ ನಂತರ ಬಿಜೆಪಿಗೆ ಬಲ ಬಂದಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿಯ ಹವಾ ಹೆಚ್ಚಿದೆ. ಕಾಂಗ್ರೆಸ್ ಪಕ್ಷವು ಶಾಸಕರಿಗೆ ಕರೆ ಮಾಡಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಹೇಳುತ್ತಿದ್ದಾರೆ. ಚುನಾವಣೆಯಲ್ಲಿ ಯಾರೂ ಇವರಿಗೆ ಬಲಿಯಾಗುವುದಿಲ್ಲ. ನಮ್ಮ ಪಕ್ಷವು ಒಗ್ಗಟ್ಟಿನಿಂದ ಕೂಡಿದೆ. ಕಾಂಗ್ರೆಸ್ ಪಕ್ಷ ಅವಸಾನದತ್ತ ಹೊರಟಿದೆ. ಮೇಘಾಲಯ, ನಾಗಾಲ್ಯಾಂಡ್‌ನಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೇರಲು ಶತಾಯ ಗತಾಯ ಪ್ರಯತ್ನ ಮಾಡುತ್ತಿದೆ. ಇದು ಸಾಧ್ಯವಾಗುವುದಿಲ್ಲ ಎಂದರು.
ಸ್ವಂತ ಬಲದ ಮೇಲೆ ಪಕ್ಷ ಅಧಿಕಾರಕ್ಕೆ: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರಗೆ ಸೋಲಿನ ಭಯ ಶುರುವಾಗಿದ್ದು, ಬಿಜೆಪಿ ಯಾವ ಪಕ್ಷದೊಂದಿಗೂ ಒಳ ಒಪ್ಪಂದ ಮಾಡಿಕೊಂಡಿಲ್ಲ. ಸ್ವಂತ ಬಲದ ಮೇಲೆ ಪಕ್ಷವು ಅಧಿಕಾರಕ್ಕೆ ಬರುತ್ತದೆ. ವಿಜಯೇಂದ್ರ ವರುಣಾದಿಂದ ಕಣಕ್ಕೆ ಇಳಿಯುವುದು ಚರ್ಚೆ ನಡೆದಿದೆ ಎಂದು ಹೇಳಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ: ಸಿಎಂ ಬೊಮ್ಮಾಯಿ ವಿಶ್ವಾಸ
ಬಿಜೆಪಿಗೆ ಹಾನಿಯಿಲ್ಲ: ಬಂಜಾರ ಮತ್ತು ಭೋವಿ ಸಮುದಾಯದವರಿಗೆ ಒಳ ಮೀಸಲಾತಿಗೆ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ, ಒಳ ಮೀಸಲಾತಿ ಕುರಿತು ಕೇವಲ ವಿರೋಧ ಪಕ್ಷದವರು ಗೊಂದಲ ಸೃಷ್ಟಿಮಾಡುತ್ತಿದ್ದಾರೆ. ಬೇರೆ ಬೇರೆ ವರ್ಗಗಳು ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಇತ್ತು. ಮುಖ್ಯಮಂತ್ರಿಗಳು ಗಟ್ಟಿನಿರ್ಧಾರ ಮಾಡಿ ಕ್ರಮ ಕೈಗೊಂಡಿದ್ದಾರೆ. ಸೂಕ್ತ ಮಾಹಿತಿ ಜೊತೆಗೆ ಸಮಾಲೋಚನೆ ಮಾಡಬೇಕು. ಬಿಜೆಪಿಗೆ ಯಾವುದೇ ಹಾನಿ ಆಗುವುದಿಲ್ಲ ಎಂದರು. ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ವಿಚಾರವಾಗಿ ಮಾತನಾಡಿದ ಅವರು, ಪಕ್ಷದಲ್ಲಿ ಒಂದು ವ್ಯವಸ್ಥೆ ಇರುತ್ತದೆ. ಕೆಲವೊಬ್ಬರು ತಾವೇ ಟಿಕೆಟ್ ಬೇಡ ಎಂದು ಹೇಳುತ್ತಾರೆ. ಕೆಲವು ವರದಿ ಆಧರಿಸಿ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ಪಕ್ಷದ ವರಿಷ್ಠರ ರಾಜಕೀಯ ಲೆಕ್ಕಾಚಾರಕ್ಕೆ ಬಿಟ್ಟವಿಚಾರವಾಗಿದೆ ಎಂದರು.