Mangaluru: ಬಿಜೆಪಿ ಪ್ರಚಾರ ವಾಹನ ಡಿಕ್ಕಿಯಾಗಿ ಯುವಕ ಸಾವು, ಪಾದಯಾತ್ರೆ ರದ್ದುಗೊಳಿಸಿದ ಶಾಸಕ!
ಬಂಟ್ವಾಳ ಬಿಜೆಪಿ ಪಾದಯಾತ್ರೆ ಹಿನ್ನೆಲೆಯಲ್ಲಿ ತೆಲಂಗಾಣದಿಂದ ಬಂದಿದ್ದ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಘಟನೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ನರಹರಿ ಪರ್ವತದ ಬಳಿ ನಡೆದಿದೆ.
ಮಂಗಳೂರು (ಜ.16): ಬಂಟ್ವಾಳ ಬಿಜೆಪಿ ಪಾದಯಾತ್ರೆ ಹಿನ್ನೆಲೆಯಲ್ಲಿ ತೆಲಂಗಾಣದಿಂದ ಬಂದಿದ್ದ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಘಟನೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ನರಹರಿ ಪರ್ವತದ ಬಳಿ ನಡೆದಿದೆ. ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಬಿಜೆಪಿಯ ಪ್ರಚಾರ ವಾಹನಕ್ಕೆ ಕಲ್ಲಡ್ಕದಿಂದ ಮೆಲ್ಕಾರ್ ಕಡೆಗೆ ತೆರಳುತ್ತಿದ್ದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ವಿಜಿತ್(35) ಮೃತಪಟ್ಟಿದ್ದಾನೆ. ಅಪಘಾತದ ತೀವ್ರತೆಗೆ ಬೈಕ್ ನಿಂದ ಎಸೆಯಲ್ಪಟ್ಟ ಸವಾರ ಮೃತಪಟ್ಟಿದ್ದು, ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ವಿಜಿತ್ ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಗ್ರಾಮ ವಿಕಾಸ ಪಾದಯಾತ್ರೆಗಾಗಿ ಈ ವಾಹನವನ್ನು ತೆಲಂಗಾಣದಿಂದ ತರಿಸಲಾಗಿತ್ತು. ಇದೇ ವಾಹನದಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಗುಜರಾತ್ ಚುನಾವಣಾ ಪ್ರಚಾರ ನಡೆಸಿದ್ದರು.
ಪಾದಯಾತ್ರೆ ರದ್ದು ಮಾಡಿದ ಶಾಸಕ ರಾಜೇಶ್ ನಾಯ್ಕ್
ತೆಲಂಗಾಣದಿಂದ ಬಂಟ್ವಾಳ ಬಿಜೆಪಿ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ಉಳಿಪ್ಪಾಡಿಗುತ್ತು ಅವರು ಆಸ್ಪತ್ರೆಗೆ ಬೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಆದಿತ್ಯವಾರ ವಿಟ್ಲಪಡ್ನೂರು ಮಲರಾಯ ದೈವಸ್ಥಾನದ ಬಳಿ ಪಾದಾಯಾತ್ರೆಯ ಸಭಾ ಕಾರ್ಯಕ್ರಮ ಮುಗಿಸಿ ರಾತ್ರಿ ವಗೆನಾಡು ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ತಂಗಿದ್ದರು. ಆದರೆ ಇಂದು ಪ್ರಚಾರದ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಾದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಶಾಸಕರು ತಂಗಿದ್ದ ಮನೆಯಿಂದ ನೇರವಾಗಿ ಆಸ್ಪತ್ರೆಗೆ ಬೇಟಿ ನೀಡಿದ್ದಾರೆ.
ಆದರೆ ಅದಾಗಲೇ ಗಂಭೀರ ವಾಗಿ ಗಾಯಗೊಂಡಿದ್ದ ಬೈಕ್ ಸಾವರ ವಿಜಿತ್ ಅವರು ಚಿಕಿತ್ಸೆ ಗೆ ಸ್ಪಂದಿಸಿದೆ ಮೃತಪಟ್ಟ ವಿಚಾರ ತಿಳಿದು ವಿಷಾದ ವ್ಯಕ್ತಪಡಿಸಿದರು. ಬಳಿಕ ಆಸ್ಪತ್ರೆಗೆ ಬಂದಿದ್ದ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ವಿಜಿತ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಲು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಮುಂದಿನ ಶವಸಂಸ್ಕಾರಕ್ಕೆ ಸಂಬಂಧಿಸಿದಂತೆ ಶಾಸಕರು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ವಿಜಿತ್ ಅವರ ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ ಮೃತದೇಹವನ್ನು ಬೆಳ್ತಂಗಡಿ ಅವರ ನಿವಾಸಕ್ಕೆ ಕೊಂಡುಹೋಗಲಿದ್ದು, ಅದರ ಸಂಪೂರ್ಣ ಜವಾಬ್ದಾರಿಯನ್ನು ಬಿಜೆಪಿ ಮುಖಂಡ ಮಾದವ ಮಾವೆ, ಪ್ರಣಾಮ್ ಅಜ್ಜಿಬೆಟ್ಟು, ಯಶೋಧರ ಕರ್ಬೆಟ್ಟು, ವಸಂತ ಅಣ್ಣಳಿಕೆ ಅವರಿಗೆ ಶಾಸಕರು ವಹಿಸಿದ್ದಾರೆ. ಈ ನಡುವೆ ಜೀಪ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಬಿಜೆಪಿ ಕಾರ್ಯಕರ್ತ ನರಹರಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕರ ನೇತೃತ್ವದಲ್ಲಿ ನಡೆಯಬೇಕಾಗಿದ್ದ ಮೂರನೇ ದಿನದ ಗ್ರಾಮ ವಿಕಾಸ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ಗುಜರಾತ್ ನಲ್ಲಿ ಮೋದಿ-ಶಾ ರೋಡ್ ಶೋ ನಡೆಸಿದ ರಥ, ಬಂಟ್ವಾಳದಲ್ಲಿ ಪ್ರಚಾರಕ್ಕೆ ಬಳಕೆ
ಮಂಗಳವಾರ 8 ಗಂಟೆಗೆ ವಗೆನಾಡು ಸುಬ್ರಾಯ ದೇವಸ್ಥಾನದಿಂದ ಹೊರಡಬೇಕಾಗಿದ್ದ, ಪಾದಯಾತ್ರೆಯನ್ನು ನಿಲ್ಲಿಸಿ ಅಪಘಾತದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ವಿಜಿತ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶೃದ್ದಾಂಜಲಿ ಅರ್ಪಿಸಲಾಯಿತು. ವಗೆನಾಡು ದೇವಸ್ಥಾನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸೇರಿದ್ದ ಕಾರ್ಯಕರ್ತರು ಮಧ್ಯಾಹ್ನದ ಪೂಜೆಯಲ್ಲಿ ಭಾಗವಹಿಸಿ ಬಳಿಕ ದೇವಳದ ಸಮೀಪವಿರುವ ಸಭಾಂಗಣದಲ್ಲಿ ಸೇರಿ ತುರ್ತುಸಭೆ ನಡೆಸಿದರು. ಈ ಸಂದರ್ಭದಲ್ಲಿ ವಿಜಿತ್ ಅವರ ಆತ್ಮಕ್ಕೆ ಶಾಂತಿ ಕೋರಿ ಶೃದ್ದಾಂಜಲಿ ಅರ್ಪಿಸಲಾಯಿತು. ಬಳಿಕ ಈ ಕಾರಣಕ್ಕಾಗಿ ಪಾದಯಾತ್ರೆಯನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ. ಸಂಪೂರ್ಣವಾಗಿ ಇಂದು ನಡೆಯಬೇಕಾಗಿದ್ದ ಪಾದಯಾತ್ರೆ ಯನ್ನು ನಿಲ್ಲಿಸಲಾಗಿದ್ದು, ಸಂಜೆಯ ಸಭಾ ಕಾರ್ಯಕ್ರಮವನ್ನು ನಿಲ್ಲಿಸಲಾಗಿದೆ.
ಅರ್ಕಾವತಿ ತನಿಖೆಯಾದರೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಜೈಲಿಗೆ: ನಳಿನ್
ಇಂದು ಸಂಜೆ ವೇಳೆ ಶಾಸಕರು ರಾತ್ರಿ ವೀರಕಂಭದ ಕೆಲಿಂಜದಲ್ಲಿ ಕಾರ್ಯಕರ್ತನ ಮನೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನಾಳೆ ಎಂದಿನಂತೆ ಬೆಳಿಗ್ಗೆ ಕೆಲಿಂಜ ದೇವಸ್ಥಾನಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿ 4. ನೇ ದಿನದ ಗ್ರಾಮವಿಕಾಸ ಯಾತ್ರೆ, ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆ ಜ.17 ರಂದು ಮಂಗಳವಾರ ಕೆಲಿಂಜದಿಂದ ನಡೆಯಲಿದೆ, ಎಂದು ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ತಿಳಿಸಿದ್ದಾರೆ.