ಕಲಬುರಗಿ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ವಗ್ರಾಮದಲ್ಲಿ ಗುಂಪು ದಾಂಧಲೆ
ಗುಂಪೊಂದು ಸುಮಾರು 8 ಜನರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ವಗ್ರಾಮ ಸೇಡಂ ತಾಲೂಕಿನ ಊಡಗಿಯಲ್ಲಿ ನಡೆದಿದೆ.
ಕಲಬುರಗಿ(ಫೆ.28): ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ವಗ್ರಾಮ ಸೇಡಂ ತಾಲೂಕಿನ ಊಡಗಿಯಲ್ಲಿ ಗುಂಪೊಂದು ಸುಮಾರು 8 ಜನರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದರಿಂದ ಉದ್ರಿಕ್ತಗೊಂಡ ಮುಸ್ಲಿಂ ಸಮುದಾಯದ ಮುಖಂಡರು, ಮಂಗಳವಾರ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ, ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ, ಪ್ರತಿಭಟಿಸಿದರು. ಫೆ.23ರಂದು ಮಧ್ಯರಾತ್ರಿ ಊಡಗಿ ಗ್ರಾಮದ ಸರ್ಕಾರಿ ಆಸ್ಪತ್ರೆ ಬಳಿ ನಿಲ್ಲಿಸಿದ್ದ 4-5 ಆಟೋಗಳ ಗ್ಲಾಸ್ ಹಾಗೂ ಟಾಪ್‌ನ್ನು ಅಪರಿಚಿತರು ಜಖಂಗೊಳಿಸಿದ್ದರು.
ಮೂವರು ಕನ್ನಡಿಗರು ಸೇರಿ 60 ಭಾರತೀಯರಿಗೆ ರಷ್ಯಾ ಸೇನೆ ವಂಚನೆ, ಶೀಘ್ರ ಬಿಡುಗಡೆಗೆ ಭಾರತ ಮನವಿ
ಈ ಸಂಬಂಧ ಫೆ.24ರಂದು ಪೋಲಿಸ್ ಠಾಣೆಗೆ ದೂರು ನೀಡಲಾಗಿತ್ತು. ಇದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡು, ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನೆಲೆಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.