ಬೆಂಗಳೂರು (ನ.16):  ರಾಜರಾಜೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ಸಾಧಿಸಲು ಸಹಕರಿಸಿದ ಪೀಣ್ಯ ದಾಸರಹಳ್ಳಿ ಮಾಜಿ ಶಾಸಕ ಎಸ್‌.ಮುನಿರಾಜು ಅವರ ಮನೆಗೆ  ಭೇಟಿ ನೀಡಿದ ಶಾಸಕ ಮುನಿರತ್ನ ಹೂ ಗುಚ್ಛ ನೀಡಿ ಕೃತಜ್ಞತೆ ತಿಳಿಸಿದರು. 

ಬಿಬಿಎಂಪಿ ಮಾಜಿ ಸದಸ್ಯೆ ಆಶಾ ಸುರೇಶ್‌, ಸುಜಾತ ಮುನಿರಾಜು ಇದ್ದರು.

RR ನಗರದಲ್ಲಿ ಗೆಲುವು ಸಾಧಿಸಿದ ಮುನಿರತ್ನ: ಕಾಂಗ್ರೆಸ್ ತಂತ್ರಗಳು ಉಲ್ಟಾ..!

ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಗೆಲುವು ಸಾಧಿಸಿದ್ದರು. ಚುನಾವಣೆಯ 2013, 2018 (ಸುಮಾರು 26 ಸಾವಿರ) ವಿಧಾನಸಭಾ ಚುನಾವಣೆಯಲ್ಲಿ ಮುನಿರತ್ನ ಅವರು ಗೆಲುವು ಸಾಧಿಸಿದ್ದರು...

 

 
 

ಆದ್ರೆ, ಬದಲಾದ ರಾಜಕೀಯ ವಿದ್ಯಾಮನಗಳಿಂದ ಮುನಿರತ್ನ ಅವರು ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದರು.