ಕೋವಿಡ್‌ನಿಂದ ಮೃತರಾದ ರೈತರ ಸಾಲ ಮನ್ನಾ : ಚಿಂತನೆಗೆ ಸ್ವಾಗತ
- ಜಿ.ಡಿ. ಹರೀಶ್‌ಗೌಡ ಅವರಿಂದ ಮಹತ್ವದ ನಿರ್ಧಾರ
- ಕೋವಿಡ್‌ನಿಂದ ಮೃತರಾದ ರೈತರ ಸಾಲ ಮನ್ನಾ
- ಕುಟುಂಬದ ಹಿತದೃಷ್ಟಿಯಿಂದಾಗಿ ಮೃತ ರೈತರ 1 ಲಕ್ಷದವರೆಗಿನ ಸಾಲ ಮನ್ನಾ
ಕಡಕೊಳ (ಜು.06): ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರು ಹಾಗೂ ಅಪೆಕ್ಸ್ ಬ್ಯಾಂಕ್‌ನ ಉಪಾಧ್ಯಕ್ಷರಾದ ಜಿ.ಡಿ. ಹರೀಶ್‌ಗೌಡ ಅವರು ಕೋವಿಡ್‌ನಿಂದ ನಿಧನರಾದ ರೈತರ 1 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡಲು ಚಿಂತಿಸಿರುವುದನ್ನು ದಿ ಯೂನಿಯನ್ ರೈತ ಸೇವಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಕಡಕೊಳ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.
ಇವರ ಚಿಂತನೆಗಳು ಜಾರಿಯಾದಲ್ಲಿ ಇದೊಂದು ಐತಿಹಾಸಿಕ ತೀರ್ಮಾನವಾಗಲಿದೆ. ಕೊರೋನಾಗೆ ತುತ್ತಾದಂತಹ ಸಂದರ್ಭದಲ್ಲಿ ಸಂಬಂಧಪಟ್ಟವರನ್ನು ಉಳಿಸಿಕೊಳ್ಳಲು ಅವರ ಕುಟುಂಬದವರು ಖಾಸಗಿ ಆಸ್ಪತ್ರೆ ಹಾಗೂ ಇನ್ನಿತರ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚವನ್ನು ಪಾವತಿಸಲು ಲಕ್ಷಾಂತರ ರೂಪಾಯಿಗಳ ಸಾಲ ಮಾಡಿ, ಇತ್ತ ಕುಟುಂಬದ ಸದಸ್ಯರನ್ನು ಉಳಿಸಿಕೊಳ್ಳಲಾಗದೆ, ಸಾಲದ ಸುಳಿಯಲ್ಲಿ ಸಿಕ್ಕಿ ಕೊಂಡಿರುತ್ತಾರೆ.
ಬೆಳೆಸಾಲಕ್ಕೆ ರೈತರ ಸೆಲ್ಫಿ, ವಂಶಾವಳಿ ಕಡ್ಡಾಯ..! .
ಇಂತಹ ಪರಿಸ್ಥಿತಿಯಲ್ಲಿ ಕೂಡಲೇ ಈ ನಿರ್ಧಾರವನ್ನು ಜಾರಿಗೆ ತಂದಲ್ಲಿ ಹಲವಾರು ರೈತ ಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಹೊರಬಂದು ಜೀವನ ನಿರ್ವಹಿಸಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.