ಆರ್‌ಎಸ್ಎಸ್ ಬ್ರಿಟಿಷ್ ಜೊತೆಗೆ ಶಾಮೀಲು ಆಗಿದ್ರು: ರಾಮಲಿಂಗಾರೆಡ್ಡಿ ವಾಗ್ದಾಳಿ
ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಬಿಜೆಪಿಯವರು ನೀಡುತ್ತಿರುವ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರ (ಅ.16): ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಬಿಜೆಪಿಯವರು ನೀಡುತ್ತಿರುವ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ನವರು ಬ್ರಿಟಿಷ್‌ರ ಜೊತೆಗೆ ಶಾಮೀಲು ಆಗಿದ್ರು ಎಂದು ಹೇಳಿಕೆ ನೀಡಿರುವ ರಾಮಲಿಂಗಾರೆಡ್ಡಿ ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಭಾಗವಹಿಸಿದರು ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್ಎಸ್, ಬಿಜೆಪಿ ಭಾಗಿ ಆಗಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ ತಾವೇ ಸ್ವಾತಂತ್ರ್ಯ ಹೋರಾಟಗಾರೆಂದು ಬಿಂಬಿಸಿಕೊಳ್ತಿದ್ದಾರೆ. ಬಿಜೆಪಿಯವರು ದೇಶವನ್ನು ಛಿದ್ರ ಛಿದ್ರ ಮಾಡ್ತಿದ್ದಾರೆ. ಬಿಜೆಪಿಯವರು ಸುಳ್ಳು ಹೇಳಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಬುರಡೆ ಜನರ ಪಕ್ಷ ಎಂದು ಬಿಜೆಪಿ ಹೆಸರು ಬದಲಾಯಿಸಿಕೊಳ್ಳಬೇಕು. ಬಿಜೆಪಿಯವರು ಸುಳ್ಳು ಹೇಳಿ ಜನರ ತಪ್ಪು ದಾರಿ ತರುತ್ತಿದ್ದಾರೆ ಇದು ಬಹಳ ದಿನ ನಡೆಯೋದಿಲ್ಲ ಎಂದಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಪರ ರಾಮಲಿಂಗಾರೆಡ್ಡಿ ಬ್ಯಾಟಿಂಗ್: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಹಿನ್ನೆಲೆ. ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಪರ ರಾಮಲಿಂಗಾರೆಡ್ಡಿ ಬ್ಯಾಟಿಂಗ್ ಮಾಡಿದ್ದಾರೆ. ನಾವು ಕರ್ನಾಟಕದವರು ಎಂದು ವಿಜಯಪುರದಲ್ಲಿ ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಮಾತಿನಂತೆ ಚುನಾವಣೆ ಆಗುತ್ತಿದೆ. ಶಶಿ ತರೂರು, ಖರ್ಗೆ ಮಧ್ಯೆ ಚುನಾವಣೆ ಆಗ್ತಿದೆ. ನೋಡೋಣ ಯಾರು ಗೆಲ್ಲುತ್ತಾರೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.