ಕರ್ನಾಟಕದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಮೈಕ್‌ ಅನುಮತಿ ಇಲ್ಲದ ಕಾರಣ ಪೊಲೀಸರು ತಡೆಯೊಡ್ಡಿದ್ದಾರೆ. ಈ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲುನಲ್ಲಿ ನಡೆದಿದ್ದು, ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. 

ಉಡುಪಿ (ಜ.15): ಕರ್ನಾಟಕದ ಪ್ರಸಿದ್ಧ ಆರಾಧನಾ ಕಲೆಗಳಲ್ಲಿ ಒಂದಾದ ಯಕ್ಷಗಾನಕ್ಕೆ ರೂಲ್ಸ್‌ ಬ್ರೇಕ್‌ ಕಾಟ ಶುರುವಾಗಿದೆ. ಮೈಕ್ ಗೆ ಅನುಮತಿ ಪಡೆದಿಲ್ಲ ಎಂದು ಯಕ್ಷಗಾನ ಪ್ರದರ್ಶನಕ್ಕೆ ತಡೆಯೊಡ್ಡಿದ ಪ್ರಕರಣ ನಡೆದಿದೆ. ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿ ಶಿರ್ಲಾಲುವಿನಲ್ಲಿ ಘಟನೆ ನಡೆದಿದೆ. ಮುಂಡ್ಲಿಯ ಈಶ್ವರ ಯಕ್ಷಗಾನ ಮಂಡಳಿಯಿಂದ ಆಯೋಜನೆಗೊಂಡಿದ್ದ ಪ್ರದರ್ಶನದಲ್ಲಿ ಪೊಲೀಸರು ಈ ರೂಲ್ಸ್‌ ಜಾರಿಗೆ ಮುಂದಾಗಿದ್ದಾರೆ. ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗಲೇ ಪೊಲೀಸರು ಪ್ರದರ್ಶನಕ್ಕೆ ತಡೆಯೊಡ್ಡಿದ್ದಾರೆ.ಅಜೆಕಾರು ಉಪನಿರೀಕ್ಷಕ ಶುಭಕರ್‌ ಅವರಿಂದ ರಾತ್ರಿ 10ರ ನಂತರ ಯಕ್ಷಗಾನ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತವಾಗಿದೆ. 10 ಗಂಟೆ ನಂತರ ಧ್ವನಿವರ್ಧಕ ಬಳಸಿದ್ದಕ್ಕೆ ಯಕ್ಷಗಾನ ಪ್ರದರ್ಶನಕ್ಕೆ ತಡೆಯೊಡ್ಡಲಾಗಿದೆ. ಅಲ್ಲದೆ, ಆಯೋಜಕರನ್ನು ಅರೆಸ್ಟ್ ಮಾಡಲು ಕೂಡ ಪೊಲೀಸರು ಮುಂದಾಗಿದ್ದಾರೆ.

ಈ ವೇಳೆ ಸಿಟ್ಟಾದ ಗ್ರಾಮಸ್ಥರು, ಇಡೀ ಗ್ರಾಮದ ಜನರನ್ನು ಅರೆಸ್ಟ್‌ ಮಾಡಿ ಎಂದು ಹೈಡ್ರಾಮಾ ನಡೆಸಿದ್ದಾರೆ. ಕಾರ್ಯಕ್ರಮ ನಿಲ್ಲಿಸದಿದ್ದರೆ ಯಕ್ಷಗಾನ ಮಂಡಳಿ ಅಧ್ಯಕ್ಷನನ್ನು ಬಂಧಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ದೂರು ದಾಖಲಾದ ಬಗ್ಗೆ ಎಫ್ಐಆರ್ ತೋರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸಾರ್ವಜನಿಕರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳದಿಂದ ತೆರಳಿದ್ದಾರೆ. ಜನವರಿ 10 ರಂದು ಪರವಾನಿಗೆಗೆ ಪಿಡಿಒ ಬಳಿ ಆಯೋಜಕರು ತೆರಳಿದ್ದರು. ಮೂರು ದಿನಗಳ ರಜೆಯ ಕಾರಣಕ್ಕೆ ಅನುಮತಿ ದೊರಕಿರಲಿಲ್ಲ. ಜನವರಿ 13ರಂದು ಅನುಮತಿಗಾಗಿ ಆಯೋಜಕರು ಅಜೆಕಾರು ಠಾಣೆಗೆ ಹೋಗಿದ್ದರು. ಈ ವೇಳೆ, ಪಂಚಾಯತ್ ಅನುಮತಿ ತರುವಂತೆ ಪೊಲೀಸರ ತಾಕಿತು ಮಾಡಿದ್ದಾರೆ.

ಸಕುಟುಂಬ ಸಮೇತ ಉಡುಪಿ, ಕೊಲ್ಲೂರಿಗೆ ಭೇಟಿ ನೀಡಿದ ಟೀಮ್‌ ಇಂಡಿಯಾ ಮಾಜಿ ಆಟಗಾರ ವಿವಿಎಸ್‌ ಲಕ್ಷ್ಮಣ್‌!

ಸಂಬಧಪಟ್ಟಂತೆ ಯಕ್ಷಗಾನ ಮಂಡಳಿ ಅಧ್ಯಕ್ಷ ಸದಾನಂದ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಾಲಕ್ಷ್ಮಿ ಸೌಂಡ್ಸ್ ನ ಮುಖ್ಯಸ್ಥ ಅಪ್ಪು ವಿರುದ್ಧವೂ ಕೇಸ್‌ ಹಾಕಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಕಟ್ಟುನಿಟ್ಟಿನ ಕ್ರಮಕ್ಕೆ ಜಾರಿಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಮುಂದಾಗಿದ್ದಾರೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ .ಅರುಣ್ ಈ ಬಗ್ಗೆ ಆಕ್ರೋಶ ಹೆಚ್ಚಾಗಿದೆ. ಆದೇಶ ಪಾಲಿಸದಿದ್ದರೆ ಆಯಾ ಠಾಣಾಧಿಕಾರಿ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಎಚ್ಚರಿಸಿದ್ದಾರೆ. ಇದರಿಂದಾಗಿ ಪೊಲೀಸರಿಗೆ ಆರಾಧನಾ ಕಲೆ ವಿರುದ್ಧ ಕ್ರಮ ಕೈಗೊಳ್ಳುವ ಅನಿವಾರ್ಯತೆ ಎದುರಾಗಿದೆ.

ಭಾರತಾಂಬೆ ರಕ್ಷಣೆಯಲ್ಲಿ ಹುತಾತ್ಮರಾದ ಕನ್ನಡಾಂಬೆಯ 3 ಮಕ್ಕಳು; ಮೂವರು ಹುತಾತ್ಮ ಯೋಧರ ವಿವರ ಇಲ್ಲಿದೆ..!