ಬೆಳಗಾವಿ(ನ.13): ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಬಿಜೆಪಿಯಲ್ಲಿ ಅವರ ಸಿಎಂ ಬಗ್ಗೆ ಸ್ಪಷ್ಟ ನಿಲುವು ಇಲ್ಲ. ಸಿದ್ದರಾಮಯ್ಯನವರು ಸಿಎಂ ಆಗಿ ಕೆಲಸ ಮಾಡಿದ್ದಾರೆ. ಅವರಿಗೆ ಯಡಿಯೂರಪ್ಪ ಬದಲಾವಣೆ ಕುರಿತು ಮಾಹಿತಿ ಸಿಕ್ಕಿರಬಹದು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌.ಪಾಟೀಲ್‌ ತಿಳಿಸಿದರು. 

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಬದಲಾವಣೆ ಊಹಾಪೋಹಗಳು ನಡೆಯುತ್ತಿವೆ. ಬಿಜೆಪಿಯಲ್ಲಿ ಗೌಪ್ಯ ಸಭೆ, ಭೋಜನ ಕೂಟದ ವ್ಯವಸ್ಥೆ ಮಾಡುತ್ತಾರೆ. ಅದು ಅವರ ಆಂತರಿಕ ವಿಚಾರ ಅದನ್ನು ನಾವು ಪ್ರಶ್ನೆ ಮಾಡಲು ಹೋಗುವುದಿಲ್ಲ ಎಂದರು.

ಕರ್ನಾಟಕದಲ್ಲಿ ಮತ್ತೊಂದು ಬೈ ಎಲೆಕ್ಷನ್: ಕೈ ಅಭ್ಯರ್ಥಿ ಆಯ್ಕೆಗೆ ಸಮಿತಿ ರಚಿಸಿದ ಡಿಕೆಶಿ

ಬಿಜೆಪಿ ಅಭ್ಯರ್ಥಿಗಳ ಗೆಲವಿಗಾಗಿ ಆರ್‌ಆರ್‌ ನಗರ ಹಾಗೂ ಶಿರಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಹಣದ ಹೊಳೆಯನ್ನೇ ಹರಿಸಿದ್ದಾರೆ. ಇವಿಎಂ ಮಷಿನ್‌ ಬಗ್ಗೆಯೂ ಕ್ಷೇತ್ರದ ಮತದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಮೊದಲಿನಿಂದಲೂ ದೂರು ಕೇಳಿಬರುತ್ತಿದೆ ಎಂದರು.