ವಯೋಸಹಜ ಕಾಯಿಲೆಯಿಂದ ಸದಾಶಿವರಾವ್‌ ಬಾಪುಸಾಹೇಬ ಭೋಸಲೆ ನಿಧನ| ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿಸಿದ ಸ್ವಾತಂತ್ರ್ಯ ಹೋರಾಟಗಾರ| ಗಾಂಧೀಜಿ ಹಾಗೂ ಆಚಾರ್ಯ ವಿನೋಬಾ ಭಾವೆ ಅವರ ವಿಚಾರಧಾರೆಗಳಿಗೆ ಪ್ರಭಾವಿತರಾಗಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದ ಭೋಸಲೆ| 

ಬೆಳಗಾವಿ(ಏ.16): ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಹಾಗೂ ಅಪ್ಪಟ ಗಾಂಧಿವಾದಿಯಾಗಿದ್ದ ಸದಾಶಿವರಾವ್‌ ಬಾಪುಸಾಹೇಬ ಭೋಸಲೆ (101) ಅವರು ವಯೋಸಹಜ ಕಾಯಿಲೆಯಿಂದ ತಾಲೂಕಿನ ಕಡೋಲಿ ಗ್ರಾಮದ ಸ್ವಗೃಹದಲ್ಲಿ ಗುರುವಾರ ನಿಧನರಾದರು.

ಮೃತರಿಗೆ ಪುತ್ರ, ಸೊಸೆ, ಮಗಳು, ಅಳಿಯ ಹಾಗೂ ಮೊಮ್ಮಕ್ಕಳು ಇದ್ದಾರೆ. ಸದಾಶಿವರಾವ ಅವರು ಗಾಂಧೀಜಿ ಹಾಗೂ ಆಚಾರ್ಯ ವಿನೋಬಾ ಭಾವೆ ಅವರ ವಿಚಾರಧಾರೆಗಳನ್ನು ಪಾಲಿಸುತ್ತಿದ್ದರು. ಅವರಿಂದ ಪ್ರಭಾವಿತರಾಗಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು.

ಬೆಳಗಾವಿ: ಸಚಿವೆ ಶಶಿಕಲಾ ಜೊಲ್ಲೆಗೆ ಮಾತೃ ವಿಯೋಗ

1946ರಲ್ಲಿ ಬ್ರಿಟಿಷ್‌ ಸರ್ಕಾರ ನಡೆಸಿದ ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 1952ರಲ್ಲಿ ಹಿರೇಬಾಗೇವಾಡಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು.