ಉಡುಪಿ(ಡಿ.14): ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಕಡೆ ಆರೋಗ್ಯ, ಕಾನೂನು, ವಸತಿ ಮತ್ತು ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸಖಿ ಒನ್‌ ಸ್ಟಾಪ್‌ ಸೆಂಟರ್‌ ಪ್ರಾರಂಭಿಸಲಾಗಿದ್ದು, ಈ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡುವ ಮೂಲಕ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ನೆರವಾಗುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ಸೂಚಿಸಿದ್ದಾರೆ.

ಅವರು ಗುರುವಾರ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಜ್ಯದಲ್ಲಿ ಸಖಿ ಒನ್‌ ಸ್ಟಾಪ್‌ ಸೆಂಟರ್‌, ಸಖಿ ಟಾÓ್ಕ… ಫೆäರ್ಸ್‌ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ.

ಹುಬ್ಬಳ್ಳಿ: ಶಾಲೆಯಲ್ಲಿ ಅವಘಡ, 28 ವಿದ್ಯಾರ್ಥಿನಿಯರು ಅಸ್ವಸ್ಥ

ರಾಜ್ಯದಲ್ಲೇ ಪ್ರಪ್ರಥಮವಾಗಿ ಉಡುಪಿ ಜಿಲ್ಲೆಯಲ್ಲಿ ಸಖಿ ಒನ್‌ ಸ್ಟಾಪ್‌ ಸೆಂಟರ್‌ಗಾಗಿಯೇ ನಿಟ್ಟೂರಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಈ ಬಗ್ಗೆ ಗ್ರಾಮಸಭೆ ಮತ್ತು ಮಹಿಳಾ ಗ್ರಾಮಸಭೆಗಳಲ್ಲಿ ಅಧಿಕಾರಿಗಳು ಮಾಹಿತಿ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪೋಸ್ಟರ್‌ ಮತ್ತು ಕರಪತ್ರಗಳ ಮೂಲಕ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಪೊಲೀಸ್‌ ಇಲಾಖೆಯಲ್ಲಿ ದಾಖಲಾಗುವ ಮಹಿಳಾ ದೌರ್ಜನ್ಯ ಪ್ರಕರಣದ ಬಗ್ಗೆ, ಮಾಹಿತಿ ಪಡೆದು, ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಸಖಿ ಕೇಂದ್ರದ ಮೂಲಕ ನೆರವು ಒಗದಿಸುವಂತೆ ಜಿಲ್ಲಾಧಿಕಾರಿ ಜಗದೀಶ್‌ ಸೂಚಿಸಿದ್ದಾರೆ.

ಧಾರ​ವಾಡ ಜಿಲ್ಲೆ​ಯಲ್ಲಿ 1650 ಕ್ಕೂ ಹೆಚ್ಚು ಬಿಪಿ​ಎಲ್‌ ಕಾರ್ಡ್‌​ಗಳು ಸರ್ಕಾ​ರ​ಕ್ಕೆ ವಾಪಸ್‌

ಸಭೆಯಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಜಿಲ್ಲಾ ಸರ್ಕಾರಿ ಅಭಿಯೋಜಕಿ ಶಾಂತಿ ಬಾಯಿ, ಜಿ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್‌, ಜಿಪಂ ಉಪ ಕಾರ್ಯದರ್ಶಿ ಕಿರಣ್‌ ಪೆಡ್ನೇಕರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕಿ ವೀಣಾ ವಿವೇಕಾನಂದ, ಡಿವೈಎಸ್‌ಪಿ ಜೈಶಂಕರ್‌, ಡಿಡಿಪಿಐ ಶೇಷಶಯನ ಕಾರಿಂಜ ಮತ್ತಿತರರು ಉಪಸ್ಥಿತರಿದ್ದರು.

ಸಖಿಯಲ್ಲಿ 21 ಪ್ರಕರಣಗಳು ದಾಖಲು

ಪ್ರಸಕ್ತ ಸಾಲಿನಲ್ಲಿ ಸಖಿ ಕೇಂದ್ರದಲ್ಲಿ ಜುಲೈನಿಂದ ನವೆಂಬರ್‌ವರೆಗೆ, ಕೌಟುಂಬಿಕ ದೌರ್ಜನ್ಯದ 13, ಲೈಂಗಿಕ ಕಿರುಕುಳ 1 ಮತ್ತು ಇತರೆ 7 ಸೇರಿದಂತೆ, 21 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 6 ಪ್ರಕರಣ ಇತ್ಯರ್ಥಗೊಂಡಿದ್ದು, 8 ಪ್ರಕರಣ ನ್ಯಾಯಾಲಯದಲ್ಲಿದ್ದು, 7 ಪ್ರಕರಣಗಳು ಸಮಾಲೋಚನೆಯ ಹಂತದಲ್ಲಿವೆ. ನೊಂದ ಮಹಿಳೆಯರಿಗೆ ಸಾಂತ್ವನ ನೀಡುವ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.