ಬೆಂಗಳೂರು(ಡಿ.18): ಕನ್ನಡದ ಹಿರಿಯ ನಟಿ ಶೃತಿ ಅವರ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಇಂದು(ಬುಧವಾರ) ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮಂಜುನಾಥ್ ಸಿಂಗ್ ಎಂದು ಗುರುತಿಸಲಾಗಿದೆ. 

ಕಳೆದ ಕೆಲವು ವರ್ಷಗಳಿಂದ ನಟಿ ಶೃತಿ ಮತ್ತು ನಟ ಶರಣ್ ಕಾರ್‌ಗೆ ಮಂಜುನಾಥ್ ಸಿಂಗ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ, ಇಂದು ಏಕಾಏಕಿ ಮಂಜುನಾಥ್ ಮಾಗಡಿ ರಸ್ತೆಯ ಫಾರೆಸ್ಟ್‌ ಗೇಟ್‌ನಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮಂಗಳವಾರ ರಾತ್ರಿ ಸ್ನೇಹಿತರೊಂದಿಗೆ ಕಡಬಗೆರೆಯಲ್ಲಿ ಮಂಜುನಾಥ್ ಅವರು ಪಾರ್ಟಿ ಮಾಡಿದ್ದರು ಎಂದು ತಿಳಿದು ಬಂದಿದೆ. ಮಂಜುನಾಥ್ ಸಾವಿನ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮದನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಡಿಸೆಂಬರ್ 18ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ