ಅರಣ್ಯಾಧಿಕಾರಿ ಗುಂಡೇಟು : ಶ್ರೀಗಂಧ ಕಳ್ಳ ಬಲಿ

  • ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯಾಧಿಕಾರಿ ಗುಂಡಿನ ದಾಳಿ
  • ಅರಣ್ಯಾಧಿಕಾರಿಗಳು ಹಾರಿಸಿದ ಗುಂಡಿಗೆ ಓರ್ವ ಸ್ಥಳದಲ್ಲೇ ಸಾವು
sandalwood thief killed by forest officer firing snr

ಕುಣಿಗಲ್‌ (ಆ.22): ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯಾಧಿಕಾರಿಗಳು ಹಾರಿಸಿದ ಗುಂಡಿಗೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಅರಣ್ಯ ಪ್ರದೇಶ ವ್ಯಾಪ್ತಿಯ ಕೆಂಕೆರೆ ಮೀಸಲು ಅರಣ್ಯದಲ್ಲಿ ನಡೆದಿದೆ. 

ಕಲಬುರಗಿ; ಮಕ್ಕಳ ಮೇಲೆ ಕುದಿಯುವ ಎಣ್ಣೆ ಸುರಿದಿದ್ದ ಮಹಿಳೆಗೆ 5 ವರ್ಷ ಶಿಕ್ಷೆ!

ಗುಂಡೇಟಿಗೆ ಬಲಿಯಾದವನ ಗುರುತು ಇನ್ನೂ ಪತ್ತೆಯಾಗಿಲ್ಲ. ಗುಂಡೇಟಿಗೆ ಬಲಿಯಾದವನು ಸೇರಿದಂತೆ ಮೂವರು ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿಯುತ್ತಿದ್ದರು ಎನ್ನಲಾಗಿದೆ. 

ಈ ವೇಳೆ ಆರೋಪಿಗಳು ಅರಣ್ಯಾಧಿಕಾರಿಗಳ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿಯೋರ್ವರಿಗೆ ಪೆಟ್ಟಾಗಿದೆ. ಆಗ ಅರಣ್ಯಾಧಿಕಾರಿಗಳು ಹಾರಿಸಿದ ಗುಂಡು ಚೋರನ ಬೆನ್ನಿಗೆ ತಾಗಿ, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದವರು ಪರಾರಿಯಾಗಿದ್ದಾರೆ.

Latest Videos
Follow Us:
Download App:
  • android
  • ios