Asianet Suvarna News Asianet Suvarna News

ಮಾನ್ಸೂನ್‌ ಮುಗಿವ ತನಕ ಮರಳುಗಾರಿಕೆ ಸ್ಥಗಿತ: ಶಿವಮೊಗ್ಗ ಡಿಸಿ

ಮರಳು ಗಣಿಗಾರಿಕೆಯನ್ನು ಜೂನ್‌ 6 ರಿಂದ ಮಾನ್ಸೂನ್‌ ಮುಕ್ತಾಯವಾಗುವ ತನಕ ಸ್ಥಗಿತಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಸ್ಟಾಕ್‌ಯಾರ್ಡ್‌ಗಳಲ್ಲಿರುವ ಮರಳನ್ನು ನಿಗದಿತ ಕಾಲಮಿತಿಯ ಒಳಗಾಗಿ ಸಾಗಾಣಿಕೆ ಮಾಡಲು ಅವಕಾಶ ನೀಡಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Sanding permission not allowed till monsoon end Says Shivamogga DC
Author
Shivamogga, First Published Jun 17, 2020, 9:54 AM IST

ಶಿವಮೊಗ್ಗ(ಜೂ.17): ಜಿಲ್ಲೆಯಲ್ಲಿ ಮಾನ್ಸೂನ್‌ ಅವ​ಧಿಯಲ್ಲಿ ಯಾವುದೇ ಕಾರಣಕ್ಕೂ ಮರಳುಗಾರಿಕೆ ನಡೆಯಲು ಅವಕಾಶ ನೀಡಬಾರದು. ಮಾನ್ಸೂನ್‌ ಮುಗಿಯುವ ತನಕ ಮರಳುಗಾರಿಕೆ ಸ್ಥಗಿತಗೊಳಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾ​ಧಿಕಾರಿ ಕೆ.ಬಿ.ಶಿವಕುಮಾರ್‌ ಅಧಿ​ಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಜಿಲ್ಲಾ​ಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಮರಳು ಗಣಿಗಾರಿಕೆಯನ್ನು ಜೂನ್‌ 6 ರಿಂದ ಮಾನ್ಸೂನ್‌ ಮುಕ್ತಾಯವಾಗುವ ತನಕ ಸ್ಥಗಿತಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಸ್ಟಾಕ್‌ಯಾರ್ಡ್‌ಗಳಲ್ಲಿರುವ ಮರಳನ್ನು ನಿಗದಿತ ಕಾಲಮಿತಿಯ ಒಳಗಾಗಿ ಸಾಗಾಣಿಕೆ ಮಾಡಲು ಅವಕಾಶ ನೀಡಲಾಗುವುದು. ಮಾನ್ಸೂನ್‌ ಅವ​ಧಿಯಲ್ಲಿ ಮರಳುಗಾರಿಕೆಯನ್ನು ನಡೆಯಲು ಅವಕಾಶ ನೀಡಬಾರದು. ತಾಲೂಕು ಮಟ್ಟದ ಸಮಿತಿಯು ಇದಕ್ಕೆ ಜವಾಬ್ದಾರಿಯಾಗಿರುವುದು ಎಂದು ತಿಳಿಸಿದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ರಶ್ಮಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಮೇ ಅಂತ್ಯದ ವರೆಗೆ ಅಕ್ರಮ ಮರಳು ಸಾಗಾಣಿಕೆ ಸಂಬಂಧ 16 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, 1.48 ಲಕ್ಷ ರು. ದಂಡ ವಸೂಲು ಮಾಡಲಾಗಿದೆ. ಮರಳು ಸಾಗಾಣಿಕೆಯಿಂದ 24.23 ಲಕ್ಷ ರು. ರಾಜಧನ ಸಂಗ್ರಹಿಸಲಾಗಿದೆ. ಹೆಚ್ಚುವರಿ ನಿಯತಕಾಲಿಕ ಪಾವತಿ ಮೊತ್ತ ರು .2.61ಕೋಟಿ ಸಂಗ್ರಹಿಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆಯಿಂದ 8 ಲಕ್ಷ ರು. ರಾಜಧನ ದಂಡ ಪಡೆಯಲಾಗಿದೆ. ಕಟ್ಟಡ ಕಲ್ಲುಗಣಿಗಾರಿಕೆಯಿಂದ 8.78 ಲಕ್ಷ ರು. ರಾಜಧನ ಪಡೆಯಲಾಗಿದ್ದು, ಕಟ್ಟಡ ಕಲ್ಲು ಅಕ್ರಮ ಗಣಿಗಾರಿಕೆ ಮತ್ತು ಸಾಗಾಣಿಕೆಯಿಂದ 3.96 ಲಕ್ಷ ರು. ದಂಡ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

ಶಿವಮೊಗ್ಗ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಖಂಡನೀಯ

ಗ್ರಾಪಂ ಮಟ್ಟದಲ್ಲಿ ಹಳ್ಳಕೊಳ್ಳದಿಂದ ಮರಳು ತೆಗೆಯಲು ಬ್ಲಾಕ್‌ ಗುರುತಿಸುವ ಕುರಿತು ತಾಲೂಕು ಮಟ್ಟದ ಸಮಿತಿಯಿಂದ ಶಿಫಾರಸು ಬಂದರೆ ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್‌ ಸಮಿತಿ ಪರಿಶೀಲಿಸಿ ಅ​ಸೂಚನೆ ಹೊರಡಿಸಲಿದೆ ಎಂದರು. ಜಿಲ್ಲಾ ಎಸ್ಪಿ ಕೆ.ಎಂ.ಶಾಂತರಾಜು, ಶಿವಮೊಗ್ಗ ಉಪವಿಭಾಗಾಧಿ​ಕಾರಿ ಟಿ.ವಿ.ಪ್ರಕಾಶ್‌, ಯೋಜನಾ ನಿರ್ದೇಶಕ ವೀರಾಪುರ ಸೇರಿದಂತೆ ವಿವಿಧ ಇಲಾಖೆ ಅ​ಧಿಕಾರಿಗಳು ಉಪಸ್ಥಿತರಿದ್ದರು.
 

Follow Us:
Download App:
  • android
  • ios