ಬೆಳ್ತಂಗಡಿ(ಜು.31): ಕೊರೋನಾ ನಿಯಂತ್ರಣಕ್ಕೆ ರಾಜ್ಯಾದ್ಯಂತ ಒಂದು ಸಾವಿರ ಯುವಕರ ತಂಡದ ಮೂಲಕ ಒಂದು ಸಾವಿರ ಗ್ರಾಮಗಳಲ್ಲಿ ಕೊರೋನಾ ಸೋಂಕು ನಿವಾರಣೆಗೆ ಅತ್ಯಾಧುನಿಕ ಮಟ್ಟದ ಡ್ರೋನ್‌ ಮೂಲಕ ಸಾವಯವ ಸ್ಯಾನಿಟೈಸರ್‌ ಸಿಂಪಡಿಸುವ ಕಾರ್ಯ ಮಾಡಲಾಗುತ್ತಿದೆ. ಇದು ಸಮಾಜಕ್ಕೆ ಮಾದರಿ ಕಾರ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ, ಡಾ.ಎ.ಪಿ.ಜೆ ಅಬ್ದುಲ್‌ ಕಲಾಂ ಶಿಷ್ಯರಾದ ಡಾ. ಕಾರ್ತಿಕ್‌ ನಾರಾಯಣ್‌ ಮತ್ತು ಚೆನ್ನೈನ ಅಣ್ಣ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಸಿಂಥಿಲ್‌ ಕುಮಾರ್‌ ನೇತೃತ್ವದ ಸುಧಾರಾಧನಾ ತಂಡ ಮತ್ತು ಎಸ್ಪಿ ರವಿ ಚೆನ್ನಣ್ಣನವರ್‌ ಮಾರ್ಗದರ್ಶನದಲ್ಲಿ ಕೊರೋನಾ ಸೋಂಕು ತಡೆಗೆ ಡ್ರೋನ್‌ ಮೂಲಕ ಸಾವಯವ ಸ್ಯಾನಿಟೈಸರ್‌ ಸಿಂಪಡನೆಗೆ ಚಾಲನೆ ನೀಡಿ ಮಾತನಾಡಿದರು.

ಕಂಟೈನ್‌ಮೆಂಟ್ ಪ್ರದೇಶದವರು ಕೆಲ್ಸಕ್ಕೆ ಹೋಗೋ ಹಾಗಿಲ್ಲ: BBMP

ಡಾ. ಕಾರ್ತಿಕ್‌ ನಾರಾಯಣ್‌ ಮಾತನಾಡಿ 16 ಲೀಟರ್‌ ದ್ರವ ತುಂಬಿಸಿಕೊಳ್ಳುವ ಸಾಮರ್ಥ್ಯ ಹೊಂದಿದ್ದು ನಿರಂತರ ಐದು ಗಂಟೆಗಳ ಕಾಲ ಬಳಸಬಹುದು. ಚೆನ್ನೈನ ಅಣ್ಣ ವಿಶ್ವವಿದ್ಯಾಲಯದ ಎಂಐಟಿಯಲ್ಲಿ ನಿರ್ಮಿಸಲಾದ ಬ್ಯಾಟರಿಚಾಲಿತ ಡ್ರೋನ್‌ ಇದರಲ್ಲಿದ್ದು ಯಾವುದೇ ಕಟ್ಟಡದ ಹೊರಾವರಣವನ್ನು ಸಂಪೂರ್ಣ ಸ್ಯಾನಿಟೈಸ್‌ ಮಾಡಬಹುದು. ಚೆನ್ನೈ, ತಮಿಳುನಾಡು ಹಾಗೂ ಇತರೆಡೆ ಈಗಾಗಲೇ ಅತ್ಯಂತ ಪರಿಣಾಮಕಾರಿ ಯಶಸ್ವಿಯಾಗಿ ಇದು ಬಳಕೆಯಾಗಿದೆ. ಈ ಡ್ರೋನ್‌ ಮೂಲಕ ಸಾವಯವ ದ್ರವ ಸಿಂಪಡನೆ ಮಾಡಿದ ಪ್ರದೇಶದಲ್ಲಿ ಕೊರೋನಾ ಸೋಂಕು ಸಂಪೂರ್ಣ ನಿವಾರಣೆಯಾಗಿದೆ. ಅಲ್ಲದೆ ಸೋಂಕಿನ ಹೊಸ ಪ್ರಕರಣ ಪ್ತತೆಯಾಗಿಲ್ಲ ಎಂದು ತಮಿಳುನಾಡು ಸರ್ಕಾರ ಆರೋಗ್ಯ ಇಲಾಖೆ ದೃಢೀಕರಣ ಪತ್ರ ನೀಡಿದೆ ಎಂದರು.

ವರವ ಕೊಡೇ ಮಹಾಲಕ್ಷ್ಮೀ... ವರ ಮಹಾಲಕ್ಷ್ಮೀ ವ್ರತದ ಮಹತ್ವ, ಆಚರಣೆ ಬಗ್ಗೆ ಒಂದಷ್ಟು ಮಾಹಿತಿ

ಕರ್ನಾಟಕ ರಾಜ್ಯದಲ್ಲಿ ಪ್ರಥಮವಾಗಿ ಧರ್ಮಸ್ಥಳ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಂಪೂರ್ಣ ಸ್ಯಾನಿಟೈಸ್‌ ಮಾಡಲಾಯಿತು. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್‌.ಎಚ್‌. ಮಂಜುನಾಥ್‌, ಧರ್ಮಸ್ಥಳ ಗ್ರಾ.ಪಂ. ಆಡಳಿತಾಧಿಕಾರಿ ಡಾ.ಕೆ. ಜಯಕೀರ್ತಿ ಜೈನ್‌, ಧರ್ಮಸ್ಥಳ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಉಮೇಶ್‌, ಸಿಬ್ಬಂದಿ ಡಾ. ದೇವಿಪ್ರಸಾದ್‌ ಮತ್ತು ಧರ್ಮಸ್ಥಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.