ಮಂಡ್ಯ(ನ.17): ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನ.18 ರಂದು ನಾಮಪತ್ರ ಸಲ್ಲಿಸುತ್ತಿರುವುದಾಗಿ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಸರ್ವೇ ದೇವೇಗೌಡ ತಿಳಿಸಿದ್ದಾರೆ.

ಕೆ. ಆರ್. ಪೇಟೆ ಪಟ್ಟಣದ ನಾಗಮಂಗಲ ರಸ್ತೆಯಲ್ಲಿರುವ ಬ್ರಾಹ್ಮಣರ ರಾಮಮಂದಿರದಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳ ಸಭೆ ನಡೆಸಿ ಮಾತನಾಡಿ, ಕಳೆದ 25ವರ್ಷಗಳ ಕಂದಾಯ ಇಲಾಖೆಯಲ್ಲಿ ಸರ್ವೇಯರ್‌ ಆಗಿ ಪ್ರಾಮಾಣಿಕವಾಗಿ ಕೆಲಸ ಮಾಡಿರುವ ನಾನು ರೈತರು ಹಾಗೂ ಕೃಷಿಕೂಲಿ ಕಾರ್ಮಿಕರ 12ಸಾವಿರಕ್ಕೂ ಹೆಚ್ಚಿನ ಭೂಮಿಯ ಸಮಸ್ಯೆಯನ್ನು ಬಗೆಹರಿಸಿಕೊಟ್ಟಿದ್ದೇನೆ ಎಂದಿದ್ದಾರೆ.

ಕೆ. ಆರ್. ಪೇಟೆ ಉಪಚುನಾವಣೆ: ಬಿಜೆಪಿಗೆ ಬಂಡಾಯದ ಬಿಸಿ

ನಾನು ಕರ್ತವ್ಯದಲ್ಲಿದ್ದಾಗ ಮಾಡಿದ ಅಲ್ಪ ಸಹಾಯವನ್ನೇ ದೊಡ್ಡದೆಂದು ಭಾವಿಸಿರುವ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರು, ನೀವು ಪಕ್ಷೇತರವಾಗಿಯೇ ಸ್ಪರ್ಧೆ ಮಾಡಿ, ನಾವು ನಿಮ್ಮೊಂದಿಗಿದ್ದೇವೆ, ಸಾರಾಸಗಟಾಗಿ ನಿಮ್ಮನ್ನು ಬೆಂಬಲಿಸಿ ಹರಸಿ ಆಶೀರ್ವದಿಸುತ್ತೇವೆ ಎಂದು ಹೇಳಿದ್ದಾರೆ.

ಕ್ಷೇತ್ರದ ಜನತೆಯ ಒತ್ತಾಯಕ್ಕೆ ಕಟ್ಟುಬಿದ್ದು ನಾನು ಪಕ್ಷೇತರನಾಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ವೇಳೆ ದೇವೇಗೌಡರ ನೂರಾರು ಬೆಂಬಲಿಗರು ಉಪಸ್ಥಿತರಿದ್ದರು.

ಸಾರಿಗೆ ಇಲಾಖೆಯಿಂದ 679 ಜನರ ಡಿಎಲ್‌ ಅಮಾನತು

ಡಿಸೆಂಬರ್ 5ರಂದು 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.