ಬೆಳಗಾವಿ(ಫೆ.21):  ಕಾಂಗ್ರೆಸ್‌ನ ಮುಂದಿನ ಮುಖ್ಯಮಂತ್ರಿ ಯಾರು ಎಂಬುವುದನ್ನು ಪಕ್ಷದ ಹೈಮಾಂಡ್‌ ನಿರ್ಧಾರ ಮಾಡುತ್ತದೆ. ಈ ಕುರಿತು ಹೈಮಾಂಡ್‌ ಏನೂ ಹೇಳಿಲ್ಲ ಎಂದು ಹೇಳುವ ಮೂಲಕ ಶಾಸಕ ಜಮಿರ್‌ ಅಹ್ಮದ್‌ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಟಾಂಗ್‌ ನೀಡಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಶಾಸಕ ಜಮೀರ್‌ ಅಹ್ಮದ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್‌ನ ಮುಂದಿನ ಮುಖ್ಯಮಂತ್ರಿಯನ್ನು ಹೈಕಮಾಂಡ್‌ ತಿಳಿಸಿಲ್ಲ. ಅವರ ಅಭಿಮಾನಿಗಳು ಹೆಸರು ಹೇಳಿದ್ದಾರೆ. ಅದೇ ರೀತಿ ಜಮೀರ್‌ ಅಹ್ಮದ್‌ ಕೂಡ ಸಿದ್ದರಾಮಯ್ಯರ ಅಭಿಮಾನಿ. ಹೀಗಾಗಿ ಅವರು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಭಾವಿಸಿದ್ದೇನೆ. ಮುಂದಿನ ಮುಖ್ಯಮಂತ್ರಿ ಕುರಿತು ನಿರ್ಧಾರವನ್ನು ಹೈಕಮಾಂಡ್‌ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

'ಸಿದ್ದರಾಮಯ್ಯರೇ ಭಾವಿ ಮುಖ್ಯಮಂತ್ರಿ'

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ, ಹೈಕಮಾಂಡ್‌ ಏನು ಹೇಳಿಲ್ಲ. ಈಗ ನನಗೂ ಸಾಮಾಜಿಕ ಜಾಲತಾಣದಲ್ಲಿ ಮುಂದಿನ ಮುಖ್ಯಮಂತ್ರಿ ಸತೀಶ್‌ ಜಾರಕಿಹೊಳಿ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಹಾಗಂತ ನಾನೇ ಮುಖ್ಯಮಂತ್ರಿ ಅಂತ ಅಲ್ಲ, ಕಾಂಗ್ರೆಸ್‌ ಪಕ್ಷ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಯಲಿದೆ ಎಂದು ತಿಳಿಸಿದರು.