Asianet Suvarna News Asianet Suvarna News

ಬೆಳಗಾವಿಯಲ್ಲಿ ಕಾಂಗ್ರೆಸ್‌ ಸೋಲಿಗೆ ಪ್ರಮುಖ ಕಾರಣವೇ 200 ರು.

ಬೆಳಗಾವಿಯನ್ನು ಕಾಂಗ್ರೆಸ್ ಕಳೆದುಕೊಳ್ಳಲಿಲ್ಲ. ಅಲ್ಲಿ ಕಾಂಗ್ರೆಸ್ ಸೋಲಿಗೆ ಪ್ರಮುಖ ಕಾರಣ 200 ರು.  200 ನೋಟಿನ ಪ್ರಭಾವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲೆ ಬೀರಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು. 

Satish Jarkiholi Reacts on Belagavi By Election Result snr
Author
Bengaluru, First Published May 5, 2021, 7:20 AM IST

ಬೆಳಗಾವಿ (ಮೇ.05): ಗೋಕಾಕ್‌ ವಿಧಾನಸಭಾ ಕ್ಷೇತ್ರದಲ್ಲಿನ  200 ನೋಟಿನ ಪ್ರಭಾವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲೆ ಬೀರಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಕಾಕ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಸ್ವಲ್ಪ ಹಿನ್ನಡೆಯಾಗಿದೆ. ನಮ್ಮ ಮತದಾರರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಆದರೆ, ಕೆಲವೆಡೆಗಳಲ್ಲಿ  200 ನೋಟಿನ ಪ್ರಭಾವದಿಂದ ಹಿನ್ನಡೆಯಾಯಾಯಿತು ಎಂದು ಹೇಳಿದರು.

ಜನತೆ ನನಗೆ ಸೋತು ಗೆದ್ದಿರುವವರು ಎಂದು ಸರ್ಟಿಫಿಕೇಟ್ ಕೊಟ್ಟಿದ್ದಾರೆ: ಜಾರಕಿಹೊಳಿ ...

ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಕಡಿಮೆ ಮತಗಳ ಅಂತರದಲ್ಲಿ ಸೋಲುಂಡಿದ್ದೇವೆ. ವಾಸ್ತವವಾಗಿ ಇದು ಕಾಂಗ್ರೆಸ್‌ ಗೆಲುವು. ಬಿಜೆಪಿ ಸೋಲು ಎಂದು ಬಿಜೆಪಿಯಲ್ಲಿಯೇ ಮಾತನಾಡಿಕೊಳ್ಳುತ್ತಿದ್ದಾರೆ. ಚುನಾವಣೆ ಆಯೋಗ ಮಂಗಲ ಅಂಗಡಿ ಅವರಿಗೆ ಗೆದ್ದಿರುವ ಸರ್ಟಿಫಿಕೇಟ್‌ ನೀಡಿರಬಹುದು. ಆದರೆ, ರಾಜ್ಯದ ಜನತೆ ನಮಗೆ ಗೆಲುವಿನ ಸರ್ಟಿಫಿಕೇಟ್‌ ನೀಡಿದ್ದಾರೆ ಎಂದು ತಿಳಿಸಿದರು.

Follow Us:
Download App:
  • android
  • ios