ಎಲ್ಲಾನೂ ಸಿಎಂ ಮಾಡೋದಾದ್ರೆ ಬೆಳಗಾವಿಗೆ 4 ಮಂತ್ರಿಗಳೇಕೆ?: ಸತೀಶ್ ಜಾರಕಿಹೊಳಿ
* ಜಿಲ್ಲೆಯಲ್ಲಿರುವ ನಾಲ್ವರು ಸಚಿವರಲ್ಲಿ ಒಬ್ಬರು ಜಿಲ್ಲಾ ಉಸ್ತುವಾರಿ ಸಚಿವರಾಗಬೇಕಿತ್ತು
* ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳೀಯರೇ ಆಗಿರಬೇಕು
* ಮುಖ್ಯಮಂತ್ರಿಗಳೇ ಎಲ್ಲವನ್ನು ಮಾಡಲು ಆಗುವುದಿಲ್ಲ
ಬೆಳಗಾವಿ(ಮೇ.31): ನಗರದ ಬಿಮ್ಸ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದಾರೆ. ಎಲ್ಲವನ್ನು ಮುಖ್ಯಮಂತ್ರಿಗಳೇ ಮಾಡುವುದಾದರೆ ಜಿಲ್ಲೆಯಲ್ಲಿರುವ ನಾಲ್ವರು ಮಂತ್ರಿಗಳು ಏಕೆ ಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಶಾಸಕ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಮಂತ್ರಿಗಳು ಬಿಮ್ಸ್‌ಗೆ ತೆರಳಿ ಸಭೆ ನಡೆಸಿ, ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು. ಮುಖ್ಯಮಂತ್ರಿಗಳೇ ಎಲ್ಲವನ್ನು ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.
ಬೆಳಗಾವಿ: ಕೋವಿಡ್ ವಾರ್ಡ್‌ಗೆ ದಿಢೀರ್ ಭೇಟಿ, ಬಿಮ್ಸ್ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ
ಯಾವುದೇ ಸರ್ಕಾರ ಅಧಿಕಾರದಲ್ಲಿರಲಿ, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳೀಯರೇ ಆಗಿರಬೇಕು ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ಸ್ಥಳೀಯರಿಗೆ ಅಲ್ಲಿನ ಸಮಸ್ಯೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿರುತ್ತದೆ. ಅನುಭವವೂ ಇರುತ್ತದೆ. ಹೀಗಾಗಿ, ಜಿಲ್ಲೆಯಲ್ಲಿರುವ ನಾಲ್ವರು ಸಚಿವರಲ್ಲಿ ಒಬ್ಬರು ಜಿಲ್ಲಾ ಉಸ್ತುವಾರಿ ಸಚಿವರಾಗಬೇಕಿತ್ತು ಎಂದರು.