'ಸಿದ್ದರಾಮಯ್ಯ ಜಾರಿಗೊಳಿಸಿದ ಯೋಜನೆಗಳೇ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲಿವೆ'
ಹಾವೇರಿ ಜಿಲ್ಲೆಯಲ್ಲಿ ಮತ್ತೆ ರಾರಾಜಿಸಲಿದೆ ಕಾಂಗ್ರೆಸ್| ಮುಂದಿನ ದಿನಗಳಲ್ಲಿ ಮತ್ತೆ ಜಿಲ್ಲೆ ಕಾಂಗ್ರೆಸ್ ಪಾಲಾಗಲಿದೆ| ಬಿಜೆಪಿಯ ಜನ ವಿರೋಧಿ-ರೈತ ವಿರೋಧಿ ನೀತಿಗಳಿಂದ ಆಕ್ರೋಶಗೊಂಡಿರುವ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಆಶೀರ್ವದಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದ ಸತೀಶ ಜಾರಕಿಹೊಳಿ|
ಕುಮಾರಪಟ್ಟಣ(ಮಾ.13): ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಹಾವೇರಿ ಜಿಲ್ಲೆ ರಾಜಕೀಯ ಬದಲಾವಣೆಯಿಂದ ಬಿಜೆಪಿ ಜಿಲ್ಲೆಯಾಗಿದೆ ಹೊರತು ಮತದಾರರು ಬದಲಾಗಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ರಾರಾಜಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕೀಹೊಳಿ ಹೇಳಿದರು.
ಸಮೀಪದ ಚಳಗೇರಿಯ ಜಿಲ್ಲಾ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಪಂಗಡದ ಜಿಲ್ಲಾಧ್ಯಕ್ಷ ಸಣ್ಣತಮ್ಮಣ್ಣ ಬಾರ್ಕಿ ಅವರ ಮನೆಗೆ ಶುಕ್ರವಾರ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಮತ್ತೆ ಜಿಲ್ಲೆ ಕಾಂಗ್ರೆಸ್ ಪಾಲಾಗಲಿದೆ. ಬಿಜೆಪಿಯ ಜನ ವಿರೋಧಿ-ರೈತ ವಿರೋಧಿ ನೀತಿಗಳಿಂದ ಆಕ್ರೋಶಗೊಂಡಿರುವ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಆಶೀರ್ವದಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಹಾವೇರಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಗೆ ಕಠಿಣ ಶಿಕ್ಷೆ
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳೇ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲಿವೆ. 5 ವರ್ಷಗಳ ಕಾಲ ಸಿದ್ದರಾಮಯ್ಯನವರು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದರು.
ಜಿಲ್ಲಾ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಪಂಗಡದ ಜಿಲ್ಲಾಧ್ಯಕ್ಷ ಸಣ್ಣತಮ್ಮಣ್ಣ ಬಾರ್ಕಿ ಮಾತನಾಡಿ, ವರ್ಷದ ಹಿಂದೆ ನಾನು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಆದರೆ, ಜಿಲ್ಲೆಯ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯದ ಮೇರೆಗೆ ರಾಜೀನಾಮೆಯನ್ನು ಹಿಂಪಡೆದಿದ್ದೇನೆ ಎಂದು ತಿಳಿಸಿದರು. ಈ ವೇಳೆ ಪಿಎಲ್ಡಿ ಬ್ಯಾಂಕ್ ಸದಸ್ಯ ಜಟ್ಟೆಪ್ಪ ಕರೇಗೌಡ್ರ, ಪರಶುರಾಮ ಜಂಗಳಿ, ಹರೀಶ ಜಂಗಳಿ, ಚಿರಂಜೀವಿ ಬಾರ್ಕಿ, ಯಲ್ಲಪ್ಪ ಬನ್ನಿಮಟ್ಟಿ ಉಪಸ್ಥಿತರಿದ್ದರು.