ಕರ್ನಾಟಕ ಸಹಕಾರ ಮಹಾಮಂಡಳಿ ರಾಜ್ಯಾಧ್ಯಕ್ಷರಿಗೆ ಕೊರೋನಾ ಕಾಣಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರು (ಆ.21):  ಕರ್ನಾಟಕ ಸಹಕಾರ ಮಹಾಮಂಡಳಿಯ ರಾಜ್ಯಾಧ್ಯಕ್ಷ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್‌ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. 

ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದಾಗ ಡಾ. ರಾಜೇಂದ್ರ ಅವರಿಗೆ ಕೊರೋನಾ ತಗುಲಿದೆ.

ಕೊರೋನಾ ಭೀತಿ: ಕೆಂಪೇಗೌಡ ಏರ್‌ಪೋರ್ಟಲ್ಲಿ ವರ್ಚ್ಯುವಲ್‌ ಮಾಹಿತಿ ಸೇವೆ..

ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡಿದ್ದು,ಈ ನಿಟ್ಟಿನಲ್ಲಿ ಪರೀಕ್ಷೆಗೆ ಒಳಗಾಗಿದ್ದು ಈ ವೇಳೆ ಕೊರೋನಾ ಪಾಸಿಟಿವ್ ಬಂದಿದೆ.

ಇದೀಗ ರಾಜೇಂದ್ರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಲಕ್ಷಲಕ್ಷ ಸಂಖ್ಯೆಯಲ್ಲಿ ಜನರು ಕೊರೋನಾ ಎದುರಿಸುತ್ತಿದ್ದಾರೆ. ಸಾವು ನೋವುಗಳು ಹೆಚ್ಚುತ್ತಲೇ ಇವೆ.