ಶಿವಮೊಗ್ಗ: ಶಾಲೆ-ಕಾಲೇಜುಗಳಿಗೆ ಇಂದು ಕೂಡ ರಜೆ
ಉತ್ತರ ಕರ್ನಾಟಕ, ಮಲೆನಾಡಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಮಲೆನಾಡಿನಲ್ಲಿ ಮಳೆ ಬಿಡದೇ ಸುರಿಯುತ್ತಿದ್ದು, ಜಿಲ್ಲಾದ್ಯಂತ ನದಿಗಳೂ ಅಪಾಯ ಮಟ್ಟ ಮೀರಿ ಹರಿಯುತ್ತಿವೆ.
ಶಿವಮೊಗ್ಗ(ಆ.08): ಉತ್ತರ ಕರ್ನಾಟಕ, ಮಲೆನಾಡಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಮಲೆನಾಡಿನಲ್ಲಿ ಮಳೆ ಬಿಡದೇ ಸುರಿಯುತ್ತಿದ್ದು, ಜಿಲ್ಲಾದ್ಯಂತ ನದಿಗಳೂ ಅಪಾಯ ಮಟ್ಟ ಮೀರಿ ಹರಿಯುತ್ತಿವೆ.
ಭಾರೀ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾದ್ಯಂತ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
24 ಗಂಟೆ ರಕ್ಷಣೆಗಾಗಿ ಮನೆ ಮೇಲೆ ಕಾದು ಕುಳಿತ ದಂಪತಿ!
ಈಗಾಗಲೇ ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿತ್ತು. ಮಳೆ ಮುಂದುವರಿದಿರುವ ಕಾರಣ ಗುರುವಾರವೂ ರಜೆ ನೀಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದು, ಜನರು ಮುಂಜಾಗೃತೆ ವಹಿಸುವ ಅಗತ್ಯವಿದೆ.
ಮಳೆ ನೀರಲ್ಲಿ ಮುಳುಗಿದ ಕರ್ನಾಟಕದ ಕರುಣಾಜನಕ ಚಿತ್ರಗಳು!