ಟೈರ್ ಬರ್ಸ್ಟ್ ಆಗಿ ಕಾರು ಪಲ್ಟಿ, ಇಬ್ಬರು ಸಾವು

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 22, Aug 2018, 5:00 PM IST
Scorpio tyre burst two died in an accident
Highlights

ಹಾಸನದಿಂದ ಬೆಂಗಳೂರು ಕಡೆಗೆ ಹೊರಟಿದ್ದ ಸ್ಕಾರ್ಪಿಯೋ ಕಾರಿನ ಟಯರ್ ಬರ್ಸ್ಟ್ ಆಗಿ, ಇಬ್ಬರು ಅಸುನೀಗಿದ್ದು, ಮತ್ತೆ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಡ್ಯ: ಟೈರ್ ಬಸ್ಟ್ ಆಗಿ ಸ್ಕಾರ್ಪಿಯೋ ಕಾರು ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿಯ ರಾಷ್ಟ್ರೀಯಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ ಉಜ್ವಲ್(30) ಮತ್ತು ದರ್ಶನ್ (35) ಮೃತ ದುರ್ದೈವಿಗಳು.

ಹಾಸನದಿಂದ ಬೆಂಗಳೂರು ಕಡೆಗೆ ಹೊರಟಿದ್ದ ಸ್ಕಾರ್ಪಿಯೋ ಕಾರಿನಲ್ಲಿ ಒಂಬತ್ತು ಮಂದಿ ಪಯಣಿಸುತ್ತಿದ್ದರು. ಟೈರ್ ಬಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ್ದಕ್ಕೆ ಕಾರು ಪಲ್ಟಿಯಾಗಿ, ಈ ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಗಡಿ ತಾಲೂಕು ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

loader