ಎಸ್‌ಡಿಪಿಐ ಕಚೇರಿಗೆ ಮೊಹರು: ದ.ಕ.ಜಿಲ್ಲಾಧಿಕಾರಿಗೆ ನೊಟೀಸ್‌

  • ಎಸ್‌ಡಿಪಿಐ ಕಚೇರಿಗೆ ಮೊಹರು: ದ.ಕ.ಜಿಲ್ಲಾಧಿಕಾರಿಗೆ ನೊಟೀಸ್‌
  • ಮೊಹರು ತೆರವು ಕೋರಿದ್ದ ಅರ್ಜಿ ವಿಚಾರಣೆ
SDPI office sealed issue  Notice to DK District Collector high court rav

ಬೆಂಗಳೂರು (ನ.23) : ‘ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ’ (ಎಸ್‌ಡಿಪಿಐ) ಸೇರಿದ ಸ್ವತ್ತುಗಳಿಗೆ ಹಾಕಲಾಗಿರುವ ಮೊಹರು ತೆರವುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಎಸ್‌ಡಿಪಿಐ ಸ್ವತ್ತುಗಳಿಗೆ ಹಾಕಿರುವ ಮೊಹರು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್‌ ಸಾದತ್‌ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಬುಧವಾರ ವಿಚಾರಣೆ ನಡೆಸಿತು.

ಎಸ್‌ಡಿಪಿಐ ಧ್ವಜ ಎಂದುಕೊಂಡು ಪೋರ್ಚುಗಲ್‌ ಧ್ವಜ ಹರಿದ ವ್ಯಕ್ತಿ, ರೊನಾಲ್ಡೊ ಅಭಿಮಾನಿಗಳಿಂದ ಗೂಸಾ!

ಕೆಲ ಕಾಲ ಅರ್ಜಿದಾರರ ಪರ ವಕೀಲ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮಂಗಳೂರು ನಗರ ಪೊಲೀಸ್‌ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಡಿ.6ಕ್ಕೆ ಮುಂದೂಡಿತು.

ಪಾಪ್ಯೂಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಜತೆ ಎಸ್‌ಡಿಪಿಐ ಯಾವುದೇ ಸಂಪರ್ಕ ಹೊಂದಿಲ್ಲ. ಪಿಎಫ್‌ಐ ಮತ್ತದರ ಸಂಸ್ಥೆಗಳನ್ನು ನಿಷೇಧಿಸುವ ಸಂದರ್ಭದಲ್ಲಿ ಗೃಹ ಸಚಿವಾಲಯ ಎಸ್‌ಡಿಪಿಐ ಹೆಸರು ಸೇರಿಸಿಲ್ಲ. ಆದರೂ ಮಂಗಳೂರಿನ ಬೀಗರೆಯಲ್ಲಿರುವ ಎಸ್‌ಡಿಪಿಐ ಮಾಹಿತಿ ಮತ್ತು ಸೇವಾ ಕೇಂದ್ರ, ಬಂಟ್ವಾಳ, ಅದ್ದೂರ್‌, ಕುದ್ರೋಳಿ, ಪಾವೂರು, ಸುರತ್ಕಲ್‌ನ ಚೊಕ್ಕಬೆಟ್ಟು, ಪರಂಗಿಪೇಟೆ, ಕಾಟಿಪಳ್ಳ, ಬಂಟ್ವಾಳದ ಮಂಚಿ, ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಕಚೇರಿ, ತಾಳಪಾಡಿಯ ಕೆ.ಸಿ. ರಸ್ತೆ, ಮಂಗಳೂರಿನ ಉಲ್ಲಾಳದಲ್ಲಿನ ಕಚೇರಿಗಳ ಮೇಲೆ ಅಕ್ರಮವಾಗಿ ದಾಳಿ ನಡೆಸಿ, ಅವುಗಳಿಗೆ ಮೊಹರು ಹಾಕಲಾಗಿದೆ ಎಂದು ಅರ್ಜಿದಾರರು ದೂರಿದ್ದಾರೆ.

ಎಸ್‌ಡಿಪಿಐಗೆ ಬಿಜೆಪಿ ಆರ್ಥಿಕ ನೆರವು: ಎಂ. ಲಕ್ಷ್ಮಣ್‌ ಗಂಭೀರ

ತುಳಿತಕ್ಕೊಳಗಾದ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತಿರುವ ಎಸ್‌ಡಿಪಿಐ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೆಟ್ಟಅಭಿಪ್ರಾಯ ಮೂಡಿಸಲು ಸರ್ಕಾರಿ ಸಂಸ್ಥೆಗಳ ಮೇಲೆ ಒತ್ತಡ ಹಾಕಲಾಗುತ್ತಿದೆ. ಅಧಿಕಾರಿಗಳು ಮೊಹರು ಹಾಕಿರುವ ಕಚೇರಿಗಳು ಬಾಡಿಗೆ ಸ್ಥಳಗಳಾಗಿದ್ದು, ದುರುದ್ದೇಶದಿಂದ ಅವುಗಳನ್ನು ಜಪ್ತಿ ಮಾಡಲಾಗಿದೆ. ಆದ್ದರಿಂದ, ಜಪ್ತಿ ಮಾಡಿರುವ ಕಚೇರಿಗಳಿಗೆ ಹಾಕಲಾಗಿರುವ ಮೊಹರು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

Latest Videos
Follow Us:
Download App:
  • android
  • ios