ಕೆಆರ್‌ಎಸ್ ಪಕ್ಷದಿಂದ ಎರಡನೇ ಜನ ಚೈತನ್ಯ ಯಾತ್ರೆ ದಾವಣಗೆರೆಗೆ ಆಗಮನ
ಕೆಆರ್‌ಎಸ್ ಪಕ್ಷದಿಂದ ಎರಡನೇ ಹಂತದ ಜನ ಚೈತನ್ಯ ಯಾತ್ರೆಯು ಜು.15 ರಂದು ಚಿತ್ರದುರ್ಗ ಜಿಲ್ಲೆಯಿಂದ ಆರಂಭವಾಗಿದ್ದು, ಶನಿವಾರ ದಾವಣಗೆರೆಗೆ ಆಗಮಿಸಿದೆ.
ದಾವಣಗೆರೆ (ಜು.17): ಕೆಆರ್‌ಎಸ್ ಪಕ್ಷದಿಂದ ಎರಡನೇ ಹಂತದ ಜನ ಚೈತನ್ಯ ಯಾತ್ರೆಯು ಜು.15 ರಂದು ಚಿತ್ರದುರ್ಗ ಜಿಲ್ಲೆಯಿಂದ ಆರಂಭವಾಗಿದ್ದು, ಶನಿವಾರ ದಾವಣಗೆರೆಗೆ ಆಗಮಿಸಿದೆ. ಜುಲೈ 30ರವರೆಗೆ 16 ಜಿಲ್ಲೆಗಳಲ್ಲಿ ಸಂಚರಿಸಿ, ಭ್ರಷ್ಟ, ಹಾಗೂ ಪರಮನೀಚ ರಾಜಕಾರಣ ಕೊನೆಗಾಣಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇಂದು ದುರಾಡಳಿತ ಮತ್ತು ದಿಕ್ಕೆಟ್ಟ ಪರಿಸ್ಥಿತಿಯಿದ್ದು, ಇದನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಮೊದಲ ಹಂತದಲ್ಲಿ 28 ದಿನಗಳ ಕಾಲ 11ಜಿಲ್ಲೆಗಳಲ್ಲಿ ಸಂಚರಿಸಿ, ತುಮಕೂರಿನಲ್ಲಿ ಸಮಾರೋಪಗೊಂಡಿದೆ.
ಇದೀಗ ದಾವಣಗೆರೆ ಆಗಮಿಸಿರುವ ಯಾತ್ರೆ ಹಾವೇರಿ, ಧಾರವಾಡ, ಬೆಳಗಾವಿ, ಜಿಲ್ಲೆಗಳ ಮೂಲಕ ಯಾತ್ರೆ ಸಾಗಲಿದೆ. ಜು.21 ರಂದು ನವಲಗುಂದ ಮತ್ತು ನರಗುಂದದಲ್ಲಿ ರೈತ ಹುತಾತ್ಮರ ಸ್ಮರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈಗಾಗಲೇ ಹಲವು ಭ್ರಷ್ಟ ಅಧಿಕಾರಿಗಳ, ರಾಜಕಾರಣಿಗಳನ್ನು ಬಯಲಿಗೆಳೆದಿದ್ದು, ಜನಪರವಾಗಿ ಶ್ರಮಿಸುತ್ತಿರುವ ಪಕ್ಷ ಎಂದರೆ ಕೆಆರ್‌ಎಸ್ ಪಕ್ಷ ಹಾಗೂ ಲೋಕಾಯುಕ್ತ ಮಾತ್ರ ಎಂದು ಮಾತನಾಡಿಕೊಳ್ಳುವಂತಾಗಿದೆ. ಪಕ್ಷವು ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಈಗಾಗಲೇ 50ಕ್ಷೇತ್ರಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.
ಇದು ಸಿದ್ದರಾಮೋತ್ಸವ ಅಲ್ಲ ಅಮೃತ ಮಹೋತ್ಸವ: ಸ್ಪಷ್ಟಪಡಿಸಿದ ಸಿದ್ದರಾಮಯ್ಯ
10,000 ಕಾರ್ಯಕರ್ತರಿದ್ದು, ಜನರು ಸಹ ಉದಾರವಾಗಿ ದೇಣಿಗೆ ನೀಡಿ ಬೆಂಬಲಿಸಿದ್ದಾರೆ. ಪಕ್ಷದ ಬಗ್ಗೆ ಜನರು ವಿಶ್ವಾಸ ಹೊಂದಿದ್ದು, ಪಾರದರ್ಶಕವಾಗಿ ಕಾರ್ಯ ನಿರ್ವಹಿಸಲಿದೆ ಎಂದರು. ದಾವಣಗೆರೆ ಉತ್ತರ ಕ್ಷೇತ್ರಕ್ಕೆ ಯುವ ಘಟಕದ ಜಿಲ್ಲಾಧ್ಯಕ್ಷ ಡಿ.ಜಿ. ಮಾಲತೇಶ್ ಅವರನ್ನು ಸಂಭಾವ್ಯ ಅಭ್ಯರ್ಥಿ ಎಂದು ಆಯ್ಕೆ ಮಾಡಲಾಗಿದೆ. ಇನ್ನುಳಿದ ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಪಾಲಿಕೆ ದುರಾಡಳಿತದ ವಿರುದ್ಧ ಕಾಂಗ್ರೆಸ್ ಆಕ್ರೋಶ: ದಾವಣಗೆರೆ ಮಹಾನಗರ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪಕ್ಷದ ಆಡಳಿತ ಸಂಪೂರ್ಣ ದಿವಾಳಿಯಾಗಿದ್ದು ಈ ಕೂಡಲೇ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ಪಕ್ಷದ ಜಿಲ್ಲಾ ಮುಖಂಡರು ಪಾಲಿಕೆ ಸದಸ್ಯರು ಮುಖ್ಯ ದ್ವಾರಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಜಿ ಎಸ್ ಮಂಜುನಾಥ್ ಗಡಿಗುಡಾಳ್ 5ತಿಂಗಳಾದರೂ ಸಹ ಪಾಲಿಕೆಯಲ್ಲಿ ಸಾಮಾನ್ಯ ಸಭೆ ಕರೆದಿಲ್ಲ.
Davanagere: ಬೆಣ್ಣೆನಗರಿ ದಾವಣಗೆರೆಯಲ್ಲಿ ಐತಿಹಾಸಿಕ ವಿಶ್ವಕರ್ಮ ಸಮ್ಮೇಳನ
ಇದರಿಂದಾಗಿ ನಗರದಾದ್ಯಂತ ಸಮಸ್ಯೆಗಳು ಉದ್ಭವಿಸುತ್ತವೆ. ಈ ಬಗ್ಗೆಯೂ ಆಡಳಿತ ಪಕ್ಷ ಗಮನಹರಿಸಿಲ್ಲ ಎಂದು ದೂರಿದರು. ಕಾಂಗ್ರೆಸ್ ಪಾಲಿಕೆ ಸದಸ್ಯ ಎ.ನಾಗರಾಜ್ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳನ್ನು ಕೇಳದ ಮೇಯರ್ ಸೇರಿದಂತೆ ಪಾಲಿಕೆ ಅಧಿಕಾರಿಗಳು ಯಾವುದೇ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಆಡಳಿತ ನಡೆಸುತ್ತಿರುವ ಬಿಜೆಪಿ ಆಡಳಿತ ಈ ಕೂಡಲೇ ತೊಲಗಬೇಕು. ಕೇವಲ ತಮ್ಮ ಪಕ್ಷದ ಜನಪ್ರತಿನಿಧಿಗಳ ಹುಟ್ಟುಹಬ್ಬಗಳನ್ನು ಆಚರಿಸುವ ಕೊಳ್ಳುವಲ್ಲಿ ಮಗ್ನನಾಗಿರುವ ಮೇಯರ್ ಹಾಗೂ ಆಡಳಿತ ಪಕ್ಷ ಯಾವುದೇ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿಲ್ಲ ಎಂದು ದೂರಿದರು.