ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ಮಹೇಂದ್ರ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿದೆ. 

ರಾಮನಗರ (ಜೂ.11): ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ಮಹೇಂದ್ರ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿದೆ. ಕಳೆದ ಮೂರು ನಾಲ್ಕು ತಿಂಗಳುಗಳಿಂದ ದೊಡ್ಡ ಮುದವಾಡಿ ಗ್ರಾಮದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿತ್ತು, ಗ್ರಾಮಸ್ಥರ ಮಾನವೀಯ ಮೇರೆಗೆ ಅರಣ್ಯ ಇಲಾಖೆಯು ಮಹೇಂದ್ರ ಅವರಿಗೆ ಸೇರಿದ ಜಮೀನಿನಲ್ಲಿ ಚಿರತೆ ಸೆರೆ ಹಿಡಿಯುವ ಬೋನು ಇಟ್ಟಿತ್ತು.

ಕಳೆದ ರಾತ್ರಿ ಮತ್ತೊಂದು ಚಿರತೆಯು ಬೋನಿಗೆ ಬಿದ್ದಿದ್ದು ಚಿರತೆ ಹಿಡಿಯುವ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯು ಯಶಸ್ವಿಯಾಗಿದೆ, ಇದೇ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ಎರಡು ವರ್ಷದ ಗಂಡು ಚಿರತೆಯನ್ನು ಸೆರೆ ಹಿಡಿಯಲಾಗಿತ್ತು, ಈಗ ಅದೇ ಜಾಗದಲ್ಲಿ ಮತ್ತೊಂದು ಚಿರತೆ ಬಿದ್ದಿರುವುದು ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕವನ್ನು ಸೃಷ್ಟಿ ಮಾಡಿದೆ. ಬೋನಿಗೆ ಬಿದ್ದ ಚಿರತೆ ಸುಮಾರು ಎರಡು ವರ್ಷದ ಗಂಡು ಚಿರತೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜೀವಜಲವೇ ವಿಷವಾಗುತ್ತಿರೋದು ಏಕೆ?: ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲೇ ಈ ಸಮಸ್ಯೆ ಹೆಚ್ಚು

ಉರುಳಿಗೆ ಸಿಲುಕಿ ಚಿರತೆ ಸಾವು: ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳೆಪಾಡಿ ಮಿತ್ತಬೆಟ್ಟು ಬಳಿ ಉರುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಕಾಡುಪ್ರಾಣಿಗಳ ಹಾವಳಿ ತಡೆಯಲಾರದೆ ಸ್ಥಳೀಯರು ಉಳೆಪಾಡಿ ಮಿತ್ತಬೆಟ್ಟು ಬಳಿ ಗುಡ್ಡದಲ್ಲಿ ಉರುಳು ಇಟ್ಟಿದ್ದರು. ಈ ಉರುಳಿಗೆ ಚಿರತೆ ಸೋಮವಾರ ರಾತ್ರಿ ಬಿದ್ದಿದೆ. ಮಂಗಳವಾರ ಸ್ಥಳೀಯ ಮನೆಯವರು ಗುಡ್ಡೆಯಲ್ಲಿ ನಾಯಿ ಬೊಗಳುವ ಶಬ್ದ ಕೇಳಿ ಭಯಭೀತರಾಗಿ ಸ್ಥಳಕ್ಕೆ ಧಾವಿಸಿದಾಗ ಉರುಳಿಗೆ ಚಿರತೆ ಬಿದ್ದು ಒದ್ದಾಡುತ್ತಿರುವುದು ಕಂಡು ಬಂದಿದೆ. ಕೂಡಲೇ ಐಕಳ ಗ್ರಾಮ ಪಂಚಾಯಿತಿ ಸದಸ್ಯ ರಾಜೇಶ್‌ ಶೆಟ್ಟಿಮತ್ತು ಸ್ಥಳೀಯರು ಅರಣ್ಯ ಇಲಾಖೆ ಅ​ಧಿಕಾರಿಗಳಿಗೆ ತಿಳಿಸಿದ್ದಾರೆ. ಅರಣ್ಯ ಇಲಾಖೆ ಅಧಿ​ಕಾರಿಗಳು ಸ್ಥಳಕ್ಕೆ ಬರುವಷ್ಟರಲ್ಲಿ ಚಿರತೆ ಉರುಳಿಗೆ ಸಿಕ್ಕಿಒದ್ದಾಡಿ ಪ್ರಾಣ ಬಿಟ್ಟಿದೆ ಎನ್ನಲಾಗಿದೆ.

ಹೊಯ್ಸಳದಲ್ಲಿ ಪೊಲೀಸ್‌ ಆಯುಕ್ತ ದಯಾನಂದ್‌ ಸಿಟಿ ರೌಂಡ್ಸ್‌

ಐಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳೆಪಾಡಿ ಪರಿಸರದಲ್ಲಿ ಕಳೆದ ಕೆಲವು ತಿಂಗಳಿನಿಂದ ಚಿರತೆಯ ಕಾಟ ವಿಪರೀತವಾಗಿದ್ದು ಸ್ಥಳೀಯರು ಭಯಬೀತರಾಗಿದ್ದರು. ಕಳೆದ ಕೆಲವು ತಿಂಗಳಿನಿಂದ ಸ್ಥಳೀಯರ ಅನೇಕ ಸಾಕು ನಾಯಿಗಳು ಚಿರತೆಗೆ ಆಹಾರವಾಗಿತ್ತು. ಐಕಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಿವಾಕರ ಚೌಟ, ಮೂಡಬಿದಿರೆ ವಲಯ ಅರಣ್ಯಾಧಿ​ಕಾರಿ ಹೇಮಗಿರಿ ಅಂಗಡಿ, ಎಸಿಎಫ್‌ ಸತೀಶ್‌, ಕಿನ್ನಿಗೋಳಿ ಬೀಟ್‌ ಫಾರೆಸ್ಟರ್‌ ರಾಜು ಎಲ್‌. ಡಿಆರ್‌ಎಫ್‌ ನಾಗೇಶ್‌ ಬಿಲ್ಲವ, ಬೀಟ್‌ ಫಾರೆಸ್ಟರ್‌ ಸಂತೋಷ್‌ ಮತ್ತಿತರರು ಭೇಟಿ ನೀಡಿದ್ದು ಚಿರತೆಯ ಕಳೇಬರವನ್ನು ಮಹಜರು ಮಾಡಿ ವ್ಯೆದ್ಯಕೀಯ ಪರೀಕ್ಷೆ ನಡೆಸಿದರು.