ಬಳ್ಳಾರಿ(ಏ.21): ನಗರದ 33ನೇ ವಾರ್ಡಿನ ಹಿರಿಯ ಕಾಂಗ್ರೆಸ್‌ ಮುಖಂಡ ಕೆ.ಗೂಳೆಪ್ಪ ಮಾಜಿ ಸಂಸದ ಸಣ್ಣಫಕ್ಕೀರಪ್ಪ ಅವರ ಸಮ್ಮುಖದಲ್ಲಿ ಮಂಗಳವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ಪ್ರಗತಿ ಕಾಣಲು ಸಾಧ್ಯವಿದೆ. ಈ ಹಿನ್ನಲೆಯಲ್ಲಿ 33ನೇ ವಾರ್ಡ್‌ನ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿ.ಸುನಿತಾ ಅವರನ್ನು ಬೆಂಬಲಿಸಿ, ಅವರ ಗೆಲುವಿಗೆ ಹಗಲಿರುಳು ಶ್ರಮಿಸಲಾಗುವುದು ಎಂದು ಹೇಳಿದರು.

ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

ಬಿಜೆಪಿ ಅಭ್ಯರ್ಥಿ ಸುನಿತಾ ಅವರು ಮಾತನಾಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ 33ನೇ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡಲಾಗುವುದು. ಈ ಭಾಗದ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು. ಬಿಜೆಪಿ ಅಭ್ಯರ್ಥಿ ಬಿ.ಸುನಿತಾ ಅವರ ಪತಿ ಹನುಮಂತಪ್ಪ ಮತ್ತಿತರರು ಉಪಸ್ಥಿತರಿದ್ದರು.