ಉಡುಪಿ(ಫೆ.29): ಹಿರಿಯ ಕಾಂಗ್ರೆಸಿಗ, ಸಹಕಾರಿ ಧುರೀಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಕೆ.ಕೆ. ಸರಳಾಯ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಿರಿಯ ಕಾಂಗ್ರೆಸ್ಸಿಗ, ಸಹಕಾರಿ ಧುರೀಣ ಕೆಕೆ ಸರಳಾಯ(88) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ನಗರದ ಪಣಿಯಾಡಿಯಲ್ಲಿರುವ  ಸರಳಾಯರ ಮನೆಯಲ್ಲಿ ಕೆ.ಕೆ. ಸರಳಾಯ ಒಬ್ಬಂಟಿಯಾಗಿ ವಾಸಿಸುತ್ತಿದ್ದರು.

'ದೇಶದಲ್ಲಿ ನಡೆಯುತ್ತಿರುವ ಗಲಭೆಗಳಿಗೆ ಕಾಂಗ್ರೆಸ್‌ ಪಕ್ಷವೇ ಕಾರಣ'

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕೆ.ಕೆ ಸರಳಾಯ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್‌ ಅವರ ನಿಕಟವರ್ತಿಯಾಗಿದ್ದರು. ಉಡುಪಿ ಜಿಲ್ಲೆಯ ಸಹಕಾರಿ ರಂಗದಲ್ಲಿ ಹೆಸರುವಾಸಿಯಾಗಿದ್ದರು. ಪಟಾಕಿ ಸರಳಾಯರೆಂದೇ ಪ್ರಸಿದ್ಧರಾಗಿದ್ದ ಸರಳಾಯ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"