ಯಾದಗಿರಿ(ಫೆ.21): ಜಿಲ್ಲೆಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಗುರುವಾರ ರಾತ್ರಿ ನಡೆದ ಎರಡು ಭೀಕರ ಅಪಘಾತ ಪ್ರಕರಣಗಳಲ್ಲಿ ಬಾಲಕನೊಬ್ಬ ಸೇರಿದಂತೆ ಐವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ. 

ಸುರಪುರ ತಾಲೂಕಿನ ನಗನೂರು ಗ್ರಾಮದಿಂದ ಚಾಮನಾಳ ತೆರಳುತ್ತಿದ್ದ ಕಾರೊಂದು, ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಯ ಬೇವಿನ ಮರಕ್ಕೆ ಡಿಕ್ಕಿಯಾಗಿ, ಬಾಲಕನೊಬ್ಬ ಸೇರಿದಂತೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಚಾಮನಾಳ ಬಳಿ ಈ ದುರ್ಘಟನೆ ನಡೆದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಾರಿನಲ್ಲಿದ್ದ ಇನ್ನಿತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟವರನ್ನು ನಗನೂರು ಗ್ರಾಮದ ವಿಶ್ವನಾಥ ಘಂಟಿ (22) ಶರಣಬಸವ ಅಂಗಡಿ (24) ಶರಣು ಕೊಡ್ಲಿಗಿ (24) ಸೇರಿದಂತೆ ಓರ್ವ ಬಾಲಕ ಎಂದು ಗುರುತಿಸಲಾಗಿದೆ. 

ಸ್ಥಳಕ್ಕೆ ಗೋಗಿ ಪೊಲೀಸರ ಭೇಟಿ ನೀಡಿದ್ದಾರೆ. ಇನ್ನೊಂದೆಡೆ, ಶಾಂತಪುರ ಕ್ರಾಸ್‌ನಲ್ಲಿ ಸಾರಿಗೆ ಸಂಸ್ಥೆಯ ಬಸ್ ಒಂದಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.