ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸರಣಿ ಅಪಘಾತ| ಇಬ್ಬರು ಸಾವು| ಮಹಾರಾಷ್ಟ್ರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಒಂದು ಲಾರಿ ಹಾಗೂ ತಮಿಳುನಾಡಿಗೆ ಹೋಗುತ್ತಿದ್ದ ಮತ್ತೊಂದು ಲಾರಿ ಹಾಗೂ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಹೊರಟಿದ್ದ ಕಂಟೇನರ್‌ ಲಾರಿಗಳ ಮಧ್ಯೆ ಡಿಕ್ಕಿ|

ಕೂಡ್ಲಿಗಿ(ಡಿ.08): ಕಾನಾಹೊಸಹಳ್ಳಿ ಸಮೀಪದ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶನಿವಾರ ಬೆಳಗ್ಗೆ ಮಹಾರಾಷ್ಟ್ರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಒಂದು ಲಾರಿ ಹಾಗೂ ತಮಿಳುನಾಡಿಗೆ ಹೋಗುತ್ತಿದ್ದ ಮತ್ತೊಂದು ಲಾರಿ ಹಾಗೂ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಹೊರಟಿದ್ದ ಕಂಟೇನರ್‌ ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸರಣಿ ಅಪಘಾತವಾದ ಪರಿಣಾಮ ಚಾಲಕ ಗಣೇಶ್‌(35) ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಚಾಲಕ ಕೂಡ್ಲಿಗೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಈತನ ಹೆಸರು ತಿಳಿದು ಬಂದಿಲ್ಲ ಎಂದು ಪೂಲೀಸರು ತಿಳಿಸಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಬಳ್ಳಾರಿಯ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ರವೀಂದ್ರ ಕುರುಬಗಟ್ಟಿ, ಪಿಎಸ್‌ಐ ನಾಗರಾಜು ಭೇಟಿ ನೀಡಿ ಪರಿಶೀಲಸಿದ್ದಾರೆ.