ಆನೇಕಲ್‌(ಅ.21): ಕುಡಿದ ಮತ್ತಿನಲ್ಲಿ ಲಾರಿ ಚಾಲನೆ ಮಾಡಿದ ಕಾರಣ ಸರಣಿ ಅಪಘಾತ ನಡೆದು ಇಬ್ಬರು ತೀವ್ರವಾಗಿ ಗಾಯಗೊಂಡು, 6 ವಾಹನಗಳು ಜಖಂಗೊಂಡ ಘಟನೆ ಅತ್ತಿಬೆಲೆ ಠಾಣಾ ವ್ಯಾಪ್ತಿಯ ಬಿಇಟಿಎಲ್‌ ಟೋಲ್‌ನಲ್ಲಿ ಮಂಗಳವಾರ ನಡೆದಿದೆ.

ಬೆಂಗಳೂರಿನಿಂದ ತಮಿಳುನಾಡು ಕಡೆಗೆ ಹೊರಟಿದ್ದು ಲಾರಿಯೊಂದು ಅತ್ತಿಬೆಲೆ ಸಮೀಪದ ಟೋಲ್‌ ಬಳಿ, ಚಾಲಕನ ನಿಯಂತ್ರಣ ತಪ್ಪಿ ಸರದಿ ಸಾಲಿನಲ್ಲಿ ನಿಂತಿದ್ದ ವಾಹನಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಟೋಲ್‌ನಲ್ಲಿ ಹಣ ಕಟ್ಟಲು ನಿಂತಿದ್ದ 6 ವಾಹನಗಳು ಜಖಂ ಆಗಿವೆ. ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 

ಮಾನ್ವಿ: ಮಿನಿ ಲಾರಿ ಪಲ್ಟಿ, ಇಬ್ಬರ ದುರ್ಮರಣ

ಲಾರಿಯನ್ನು ವಶಕ್ಕೆ ಪಡೆದಿದ್ದು, ಮಾಲೀಕ ಹಾಗೂ ಚಾಲಕನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.