ಸುಬ್ರಹ್ಮಣ್ಯ (ಅ.30):ಈ ಬಾರಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಬದಲಾಗಿ ಅಭಿವೃದ್ಧಿ ಸಮಿತಿ ರಚನೆ ಮಾಡಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ರಾಜ್ಯದ ಅತ್ಯಂತ ಶ್ರೀಮಂತ ದೇಗುಲ ಕುಕ್ಕೆಗೆ ನೂತನ ಅಭಿವೃದ್ಧಿ ಸಮಿತಿ ರಚನೆ ಮಾಡಲಾಗಿದೆ. 
 
ಕಾರ್ಯನಿರ್ವಾಹಣಾಧಿಕಾರಿ ಸೇರಿ ಸಮಿತಿಗೆ ಆರು ಜನರ ಅಭಿವೃದ್ಧಿ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.  ಪಿ.ಜಿ.ಎಸ್.ಪ್ರಸಾದ್, ಕೃಷ್ಣ ಶೆಟ್ಟಿ ಕಡಬ, ಪ್ರಸನ್ನ, ಎಸ್.ಮೋಹನ್ ರಾಮ್, ವನಜಾ ಭಟ್ ಸಮಿತಿ ಸದಸ್ಯರಾಗಿ ನೇಮಕವಾಗಿದ್ದಾರೆ. 

ಕುಕ್ಕೆ ದೇವಳದ ಕೋಟ್ಯಂತರ ರೂ. ಬೆಲೆಬಾಳುವ ಆಭರಣ ನಾಪತ್ತೆ ...

ಮುಂದಿನ ಮೂರು ವರ್ಷಗಳ ಅವಧಿಗೆ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದ್ದು, ವ್ಯವಸ್ಥಾಪನಾ ಸಮಿತಿಗೆ ಪೂರಕವಾಗಿ ಕೆಲಸ ಮಾಡಬೇಕು, ಕ್ಷೇತ್ರದ ಆಂತರಿಕ ವಿಚಾರದಲ್ಲಿ ಕೈಹಾಕದಂತೆ ಸಮಿತಿಗೆ ಸೂಚನೆ ನೀಡಲಾಗಿದೆ. 

ಭವಿಷ್ಯದಲ್ಲಿ ಕುಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಸರ್ಕಾರದ ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ಮೂರು ವರ್ಷದ ಅವಧಿಯಲ್ಲಿ ಅಭಿವೃದ್ಧಿ ಸಮಿತಿ ರಚನೆ ಮಾಡಲಾಗಿದೆ.