ವಿಜಯಪುರ[ಮೇ. 18]  ಟಾಟಾ ಏಸ್ ವಾಹನ ಪಲ್ಟಿಯಾಗಿದ್ದು ಸ್ಥಳದಲ್ಲೇ 5 ಜನರು ಸಾವನ್ನಪ್ಪಿದ್ದು 10 ಮಂದಿಗೆ ಗಂಭೀರ ಗಾಯಗಳಾಗಿವೆ. ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಬಂದು ವಾಪಸ್ ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ.

ಸಂಬಂಧಿಯೊಬ್ಬರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಹೊರಟವರು ಮಸಣ ಸೇರಿದ್ದಾರೆ. ಇಬ್ಬರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮೃತರು ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಹಳದೂರ ಗ್ರಾಮದ ನಿವಾಸಿಗಳು. ಎಂಧು ಪತ್ತೆ ಮಾಡಲಾಗಿದೆ. ಗಾಯಾಳುಗಳಿಗೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ.