Asianet Suvarna News Asianet Suvarna News

ದಾವಣಗೆರೆ: ಒಳಚರಂಡಿ ಗುಂಡಿಗಿಳಿದು ವ್ಯಕ್ತಿಯಿಂದ ಸ್ವಚ್ಛತೆ

ದಾವಣಗೆರೆ ನಗರದ ಆರ್.ಎಚ್‌.ಛತ್ರಕ್ಕೆ ಹೊಂದಿರುವ ಹೂವಿನ ಮಳಿಗೆಗಳು, ಬಾಟಾ ಶೋ ರೂಂ ಎದುರಿನಲ್ಲಿ ಕೂಲಿಗೆ ಬಂದ ಬಡವರನ್ನು ಮಲದ ಗುಂಡಿಗೆ ಇಳಿಸಿ, ಒಳಚರಂಡಿ ನೀರು ಕಟ್ಟಿರುವುದನ್ನು ತೆರವು ಮಾಡಿಸಲಾಗಿದೆ. 

Sewer leaning by person in Davanagere grg
Author
First Published Jan 6, 2024, 10:45 PM IST

ದಾವಣಗೆರೆ(ಜ.06):  ಕೊಳಚೆಯಿಂದ ಕಟ್ಟಿಕೊಂಡಿದ್ದ ಒಳಚರಂಡಿ ಗುಂಡಿ ಸ್ವಚ್ಛತೆಗೆ ಮಾನವರನ್ನು ಬಳಸಿಕೊಂಡ ಘಟನೆ ದಾವಣಗೆರೆ ಮಹಾನಗರದಲ್ಲಿ ಶುಕ್ರವಾರ ನಡೆದಿದೆ. 

ನಗರದ ಆರ್.ಎಚ್‌.ಛತ್ರಕ್ಕೆ ಹೊಂದಿರುವ ಹೂವಿನ ಮಳಿಗೆಗಳು, ಬಾಟಾ ಶೋ ರೂಂ ಎದುರಿನಲ್ಲಿ ಕೂಲಿಗೆ ಬಂದ ಬಡವರನ್ನು ಮಲದ ಗುಂಡಿಗೆ ಇಳಿಸಿ, ಒಳಚರಂಡಿ ನೀರು ಕಟ್ಟಿರುವುದನ್ನು ತೆರವು ಮಾಡಿಸಲಾಗಿದೆ. 

ಸಿದ್ದರಾಮಯ್ಯ ದೇಶಭಕ್ತರ ಪರವೋ, ಭಯೋತ್ಪಾದಕರ ಪರವೋ ಸ್ಪಷ್ಟಪಡಿಸಲಿ: ರೇಣುಕಾಚಾರ್ಯ

ಒಳಚರಂಡಿ ಪೈಪ್‌ನಲ್ಲಿ ತ್ಯಾಜ್ಯ ತುಂಬಿ ಅದು ಸರಾಗವಾಗಿ ಹರಿಯದೇ, ಕಟ್ಟಿ ನಿಂತುಕೊಂಡಿತ್ತು. ಅದನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ 3-4 ಮಂದಿ ಕೆಲಸಗಾರರು ತೊಡಗಿದ್ದು, ಒಬ್ಬ ವ್ಯಕ್ತಿ ಪಕ್ಕದಲ್ಲೇ ನಿಂತು ಕೆಲಸ ಮಾಡಿಸುತ್ತಿದ್ದರು. ಇದು ಪಾಲಿಕೆ ಕೆಲಸವಾ ಅಥವಾ ಖಾಸಗಿಯವರದ್ದಾ ಎಂಬುದು ಸ್ಪಷ್ಟವಾಗಿಲ್ಲ. ತೊಡೆಮಟ್ಟದ ಒಳ ಚರಂಡಿ ಗುಂಡಿಗೆ ವ್ಯಕ್ತಿಯನ್ನು ಇಳಿಸಿದ್ದು ಕಂಡ ಜಿಲ್ಲಾ ಅಖಿಲ ಕರ್ನಾಟಕ ಮ್ಯಾನ್‌ ಹೋಲ್‌ ಸ್ಕ್ಯಾವೆಂಜರ್ಸ್ ಸಫಾಯಿ ಕರ್ಮಚಾರಿಗಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಎಚ್‌.ಎನ್.ಉಚ್ಚೆಂಗೆಪ್ಪ ಸ್ಥಳಕ್ಕೆ ತೆರಳಿ ತರಾಟೆಗೆ ತೆಗೆದುಕೊಂಡಿದ್ದಾರೆ.

Follow Us:
Download App:
  • android
  • ios