Asianet Suvarna News Asianet Suvarna News

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಯುವತಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ

ಜ.1ರಂದು ಮೆಜೆಸ್ಟಿಕ್‌ನ ಮೆಟ್ರೋ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ಮೆಟ್ರೋ ರೈಲು ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. 

Sexual Harassment of Young Woman in Namma Metro Station in Bengaluru grg
Author
First Published Jan 8, 2024, 4:16 AM IST

ಬೆಂಗಳೂರು(ಜ.08):  ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಯುವತಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಸಿಬ್ಬಂದಿಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೇಳಿ ಬಂದಿದೆ.

ಜ.1ರಂದು ಮೆಜೆಸ್ಟಿಕ್‌ನ ಮೆಟ್ರೋ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ಮೆಟ್ರೋ ರೈಲು ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. 

ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ; ಗರ್ಭಾವತಿಯಾದ ಬಳಿಕ ಪ್ರಕರಣ ಬಯಲಿಗೆ!

ಆ ವ್ಯಕ್ತಿ ಪೊಲೀಸರ ಬಳಿ ತನ್ನ ತಪ್ಪೊಪ್ಪಿಕೊಂಡಿದ್ದು, ಮುಂದೆ ಹೀಗೆ ನಡೆದುಕೊಳ್ಳುವುದಿಲ್ಲ ಎಂದು ಕ್ಷಮೆಯಾಚಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಉಪ್ಪಾರಪೇಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios