ಕಾರ್ಕಳ(ಜೂ. 03): ಬಾಲಕನೊಬ್ಬನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಸಚ್ಚರಿಪೇಟೆಯ ನಿವಾಸಿ ಇಬ್ರಾಹಿಂ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಲೈಂಗಿಕ ಕಿರುಕುಳದ ಬಗ್ಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದು ವೈರಲ್‌ ಆಗಿದ್ದು, ಪ್ರಕರಣ ಬೆಳಕಿಗೆ ಬಂದಿತ್ತು. ನಂತರ ಸಂತ್ರಸ್ತ ಬಾಲಕನು ಪೋಷಕರೊಂದಿಗೆ ಬಂದು ದೂರು ನೀಡಿದ್ದನು.

ವಿವಾಹಿತನ ಕಾಮದಾಟದಿಂದ ಹೆಣ್ಣು ಮಗುವಿಗೆ ಜನ್ಮ ನೀಡಿದ 13ರ ಬಾಲೆ

ಈ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆ ಉಪನಿರೀಕ್ಷಕ ನಾಸೀರ್‌ ಹುಸೈನ್‌ ಮತ್ತು ಕ್ರೈಂ ತಂಡದ ಉಪನಿರೀಕ್ಷಕ ದಿಲೀಪ್‌ ಅವರು ಆರೋಪಿಯನ್ನು ಬಂಧಿಸಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ ಅವರು ಬಾಲಕನೊಂದಿಗೆ ಆಪ್ತಸಮಾಲೋಚನೆ ನಡೆಸಿ, ಪೋಷಕರಿಗೆ ಆತ್ಮಸ್ಟೈರ್ಯ ನೀಡಿದರು. ಮತ್ತು ಶಿಕ್ಷಣ ಮುಂದುವರಿಸುವಂತೆ ಸಲಹೆ ನೀಡಿದರು.