Asianet Suvarna News Asianet Suvarna News

ಸರ್ಕಾರಿ ಶಾಲೆಗಳ ಉಳಿವಿಗಾಗಿ ಎಸ್ಎಫ್ಐ ಜಾಥಾ

ಸರ್ಕಾರಿ ಶಾಲೆಗಳ ಉಳಿವಿಗಾಗಿ ಹಾಗೂ  ಶಿಕ್ಷಣದಲ್ಲಿ ಉಂಟಾದ ತೊಂದರೆಗಳ ಹೋಗಲಾಡಿಸಲು ಎಸ್‌ಎಫ್‌ಐ ಶಿಕ್ಷಣ ಉಳಿಸಿ, ಸಂವಿಧಾನ ಉಳಿಸಿ, ಭಾರತ ಉಳಿಸಿ' ಎಂಬ ಘೋಷಣೆಯೊಂದಿಗೆ ದೇಶ ವ್ಯಾಪಿ ಜಾಥಾ ನಡೆಸುತ್ತಿದೆ.

SFI jatha for survival of government schools akb
Author
Raichur, First Published Aug 7, 2022, 3:10 PM IST

ವರದಿ : ಜಗನ್ನಾಥ ಪೂಜಾರ್, ಏಷ್ಯಾನೆಟ್ ಸುವರ್ಣನ್ಯೂಸ್ 
ರಾಯಚೂರು: ದೇಶದಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗವು ರಾಷ್ಟ್ರವ್ಯಾಪಿ ಶಿಕ್ಷಣವನ್ನು ಹಿನ್ನಡೆಗೊಳಿಸಿದೆ. ಡಿಜಿಟಲ್ ವಿಭಜನೆ ಮತ್ತು ಆನ್‌ಲೈನ್ ಶಿಕ್ಷಣದ ಪರಿಣಾಮ ಅಸಂಖ್ಯಾತ ವಿದ್ಯಾರ್ಥಿಗಳು ಒಂದು ಹಂತದ ಶಿಕ್ಷಣದಿಂದ ದೂರ ಉಳಿದಿದ್ದಾರೆ ಎಂದು ಎಸ್ ಎಫ್ ಐ ರಾಜ್ಯಾಧ್ಯಕ್ಷ ಅಮರೇಶ್ ಕಡಗದ್ ಹೇಳಿದರು. ಆಗಸ್ಟ್ 01 ರಂದು ಏಕಕಾಲಕ್ಕೆ ಕಾಶ್ಮೀರದ ಶ್ರೀನಗರ ಮತ್ತು ಕನ್ಯಾಕುಮಾರಿಯಲ್ಲಿ ಉದ್ಘಾಟನೆಗೊಂಡು ಸೆಪ್ಟೆಂಬರ್ 25ರವರೆಗೆ ದೇಶದ ಐದು ವಿವಿಧ ಮೂಲೆಗಳಿಂದ 'ಶಿಕ್ಷಣ ಉಳಿಸಿ, ಸಂವಿಧಾನ ಉಳಿಸಿ, ಭಾರತ ಉಳಿಸಿ' ಎಂಬ ಘೋಷಣೆಯೊಂದಿಗೆ SFI ಕೇಂದ್ರ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಜಾಥಾ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕನ್ಯಾಕುಮಾರಿಯಿಂದ ಹೊರಟ ಜಾಥವು ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದ ಮೂಲಕ ಆಗಸ್ಟ್ 10ರಂದು ರಾಯಚೂರಿಗೆ ಬರಲಿದೆ ಎಂದರು. 

ಶಿಕ್ಷಣದ ಬಗ್ಗೆ ಸರ್ಕಾರದ ನೀತಿ, ನಿರ್ಲಕ್ಷ್ಯದಿಂದ ಸಾಕಷ್ಟು ತೊಂದರೆ ಆಗುತ್ತಿದೆ. NDA ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕ ನಿಧಿಯ ಕಡಿತ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಬಲವಂತದ ಅನುಷ್ಠಾನ ಮತ್ತು ಸಾಮಾನ್ಯ ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆ (CUET) ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಯಂತಹ ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳನ್ನು ನಡೆಸುವ ತಾರತಮ್ಯದ ಮಾರ್ಗವು ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ದುರ್ಬಲಗೊಳಿಸುತ್ತದೆ. ಖಾಸಗೀಕರಣಗೊಳಿಸುವ, ವ್ಯಾಪಾರೀಕರಣಗೊಳಿಸುವ ಮತ್ತು ಆದ್ದರಿಂದ ಶಿಕ್ಷಣ ವ್ಯವಸ್ಥೆಯನ್ನು ಕೋಮುವಾದಗೊಳಿಸುವ ಮೂಲಕ ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸಲು ಸರ್ಕಾರ ಮುಂದಾಗಿದೆ.‌ ಸರ್ಕಾರಿ ಶಾಲೆಗಳು ಉಳಿಯಬೇಕು ಎಂಬ ಮಹಾದಾಸೆಯಿಂದ ಎಸ್ ಎಫ್ ಐ ಸಂಘಟನೆಯೂ 'ಮಾರ್ಚ್ ಫಾರ್ ಎಜುಕೇಶನ್' ಹೆಸರಿನ ಭಾರತ ಜಾಥಾವನ್ನು ಆಯೋಜಿಸಿದೆ ಎಂದು ಅವರು ಹೇಳಿದರು. 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ವಯ್ನಾಡ್‌ ಕಚೇರಿ ಧ್ವಂಸ ಮಾಡಿದ ಎಸ್ಎಫ್ಐ!

ಇನ್ನೂ ರಾಜ್ಯ ಸರಕಾರ ಸರಕಾರಿ ಕನ್ನಡ ಶಾಲೆಗಳನ್ನು ಅಭಿವೃದ್ಧಿಪಡಿಸುವುದನ್ನು ಬಿಟ್ಟು ವಿದ್ಯಾರ್ಥಿಗಳ ಕೊರತೆ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಸುಮಾರು 13,800 ಸರಕಾರಿ ಕನ್ನಡ ಶಾಲೆಗಳನ್ನು ಮುಚ್ಚಲು ಹೊರಟಿರುವುದನ್ನು SFI ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ನಮ್ಮ ರಾಜ್ಯದಲ್ಲಿ ಬಹುತೇಕ ಬಡ, ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ನಗರದ ಸ್ಲಂ ನಿವಾಸಿಗಳ ಮಕ್ಕಳು ತಮ್ಮ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳ ಮೇಲೆ ಅವಲಂಬನೆ ಆಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ರಾಜ್ಯ ಸರ್ಕಾರದ ಶಿಕ್ಷಣ ವಿರೋಧಿ ನೀತಿಯಾಗಿದೆ. ಇದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿದರು. 

ಇನ್ನೂ ಸುದ್ದಿಗೋಷ್ಟಿಯಲ್ಲಿ ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಅಮರೇಶ್ ಕಡಗದ, ರಾಜ್ಯ ಉಪಾಧ್ಯಕ್ಷ ಶಿವಕುಮಾರ್ ಮ್ಯಾಗಳಮನಿ, ರಾಜ್ಯ ಜಂಟಿ ಕಾರ್ಯದರ್ಶಿ ಭೀಮನಗೌಡ ಸಂಕೇಶ್ವರಾಳ, ಎಸ್‌ಎಫ್ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರ, ಜಿಲ್ಲಾ ಉಪಾಧ್ಯಕ್ಷ ಬಸವರಾಜ್ ದೀನಸಮುದ್ರ ಇದ್ರು‌.

ಕೋಲಾರ ವಿಸ್ಟ್ರಾನ್ ಕಂಪನಿ ಧ್ವಂಸ ಪ್ರಕರಣ; ಬಂಧಿತ SFI ಅಧ್ಯಕ್ಷನ ಬಿಡುಗಡೆಗೆ DYF ಆಗ್ರಹ!

Follow Us:
Download App:
  • android
  • ios