ಹೊಸಕೋಟೆ (ಡಿ.07): ಶಾಸಕ ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಪಕ್ಷದ ಹೈಕಮಾಂಡ್‌ ತೀರ್ಮಾನ ಕೈಗೊಂಡು ದಿನಾಂಕ ಪ್ರಕಟಿಸಲಿದೆ ಎಂದು ಮಾಜಿ ಸಚಿವ ಕೃಷ್ಣಬೈರೇಗೌಡ ಹೇಳಿದರು. 

ನಗರದಲ್ಲಿ ನಡೆದ ಕಾರ‍್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ತಾಲೂಕಿನಲ್ಲಿ ಹೋಬಳಿ ಮಟ್ಟದ ಮುಖಂಡರು, ಕಾರ್ಯಕರ್ತರ ಸಭೆಗಳನ್ನು ಏರ್ಪಡಿಸಿ ಸಲಹೆಗಳನ್ನು ಸ್ವೀಕರಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷರಿಗೆ ತಿಳಿಸಲಾಗಿದೆ. 

ಗ್ರಾಮ ಪಂಚಾಯತ್ 4 ಸ್ಥಾನ 26 ಲಕ್ಷಕ್ಕೆ ಹರಾಜು? ..

ಇವುಗಳನ್ನು ಪರಿಶೀಲಿಸಿ ರಾಜ್ಯ ಉಸ್ತುವಾರಿಗಳ ಸಮ್ಮುಖದಲ್ಲಿ ಪ್ರಮುಖ ರಾಜ್ಯ ಮುಖಂಡರನ್ನು ಒಳಗೊಂಡ ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಗುವುದು. ಶೀಘ್ರದಲ್ಲಿಯೇ ಸೇರ್ಪಡೆ ಕಾರ್ಯಕ್ರಮ ಕೈಗೊಳ್ಳುವಂತೆ ತಾಲೂಕಿನ ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರ ಅಭಿಪ್ರಾಯವನ್ನು ಹೈಕಮಾಂಡ್‌ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.