ಕೈಗಾರಿಕೆಗಳ ಆರಂಭಕ್ಕೆ ಶಿರಾ ಉತ್ತಮ ಸ್ಥಳ : ಟಿ.ಬಿ.ಜಯಚಂದ್ರ
ಶಿರಾ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ಹೂಡಿಕೆದಾರರಿಗೆ ಉತ್ತಮ ವಾತಾವರಣವಿದ್ದು, ಕೈಗಾರಿಕೆಗಳ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡಲು ತಾಲೂಕು ಆಡಳಿತ ಸಿದ್ಧವಾಗಿದೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.
ಶಿರಾ : ಶಿರಾ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ಹೂಡಿಕೆದಾರರಿಗೆ ಉತ್ತಮ ವಾತಾವರಣವಿದ್ದು, ಕೈಗಾರಿಕೆಗಳ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡಲು ತಾಲೂಕು ಆಡಳಿತ ಸಿದ್ಧವಾಗಿದೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.
ನಗರದ ಶಾಸಕರ ಕಚೇರಿಯಲ್ಲಿ ಕೈಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನೆಡಸಿದರು. ಚೆನ್ನೈ-ಬೆಂಗಳೂರು-ಚಿತ್ರದುರ್ಗ, ಬಾಂಬೆ ಕಾರಿಡಾರ್ ಆಗಿರುವುದರಿಂದ ಶಿರಾ ಕೈಗಾರಿಕಾ ವಸಾಹತು ಪ್ರದೇಶದ ಎರಡನೇ ಹಂತ ವಿಸ್ತರಣೆ ಮಾಡಲು ಶೀಘ್ರದಲ್ಲೇ ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಶಿರಾ ಕೈಗಾರಿಕಾ ಪ್ರದೇಶಕ್ಕೆ ನೀರು ಒದಗಿಸುವ ಬಗ್ಗೆ ಶೀಘ್ರವಾಗಿ ಆಡಳಿತಾತ್ಮಕ ಮಂಜೂರು ನೀಡಲಾಗುವುದು ಅಲ್ಲದೆ ಡಿಸೆಂಬರ್ ವೇಳೆಗೆ ಪವರ್ ಸ್ಟೇಷನ್ ಆರಂಭವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಲಿಂಗರಾಜ್, ಕೆಐಡಿಬಿ ಕಾರ್ಯಪಾಲಕ ಅಭಿಯಂತರ ಲಕ್ಷ್ಮೀಶ್, ಸಿಬ್ಬಂದಿ ಮತ್ತು ಅಡಳಿತ ಇಲಾಖೆಯ ಉಪ ಕಾರ್ಯದರ್ಶಿ ಮಾರುತಿ ಪ್ರಸನ್ನ, ಜಿಲ್ಲಾ ಅಭಿವೃದ್ಧಿ ಅಧಿಕಾರಿ ಕುಷ್ಯಂತ್, ಸಹಾಯಕ ನಿರ್ದೇಶಕ ಸಿದ್ದೇಶ್ ಸೇರಿದಂತೆ ಹಲವರು ಹಾಜರಿದ್ದರು
ಭರವಸೆ ಈಡೇರಿಸಿದ ಮೊದಲ ಸರ್ಕಾರ ಕಾಂಗ್ರೆಸ್
ಶಿರಾ (ಆ.06): ದೇಶದಲ್ಲಿಯೇ ಕೊಟ್ಟ ಭರವಸೆಗಳನ್ನು ಈಡೇರಿಸಿದ ಸರ್ಕಾರವೆಂದರೆ ಅದು ಕಾಂಗ್ರೆಸ್ ಸರ್ಕಾರ. ಬಡ, ಮಧ್ಯಮ ವರ್ಗದ ಕುಟುಂಬದ ಅರ್ಥಿಕ ಹೊರೆ ಕಡಿಮೆ ಮಾಡಲು ಗೃಹಜ್ಯೋತಿ ಸಹಕಾರಿಯಾಗಲಿದೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು. ನಗರದ ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದರು. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಅಲ್ಲದೆ ಸೌರ ವಿದ್ಯುತ್ ಉತ್ಪಾದನೆ ಮೂಲಕ ಇಡೀ ದೇಶದಲ್ಲಿ ಮಾದರಿ ರಾಜ್ಯವಾಗಿದೆ.
ಗೃಹ ಜ್ಯೋತಿ ಯೋಜನೆಯಡಿ ಶಿರಾ ತಾಲೂಕಿನ 77000 ಜನ ಫಲಾನುಭವಿಗಳಾಗಿದ್ದಾರೆ. ಶಿರಾ ನಗರದಲ್ಲಿ ಕೈಗಾರಿಕೆಗಳು ಹೆಚ್ಚು ಸ್ಥಾಪನೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾದಲ್ಲಿ ಬೆಸ್ಕಾಂ ವಿಭಾಗ ಆರಂಭಿಸಲಾಗುವುದು. ಜೊತೆಗೆ ಪಟ್ಟನಾಯಕನಹಳ್ಳಿಯಲ್ಲಿಯೂ ಬೆಸ್ಕಾಂ ಉಪ ವಿಭಾಗ ಆರಂಭಿಸಲಾಗುವುದು ಎಂದರು. ಶಿರಾ ತಾಲೂಕಿನ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಆಗಸ್ಟ್ ತಿಂಗಳ ಕೊನೆಯಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗುವುದು. ಟಾಟಾ ಕಂಪನಿ ಸೇರಿದಂತೆ ಹೆಸರಾಂತ ಕಂಪನಿಗಳು ಭಾಗವಹಿಸಲಿವೆ.
ತಂಬಾಕಿಗೆ ಪರ್ಯಾಯವಾಗಿ ರೇಷ್ಮೆ ಬೆಳೆಯಿರಿ: ರೈತರಿಗೆ ಸಚಿವ ವೆಂಕಟೇಶ್ ಸಲಹೆ
ಈ ಉದ್ಯೋಗ ಮೇಳದಲ್ಲಿ ಸುಮಾರು 2000 ಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಆದ್ದರಿಂದ ಎಲ್ಲಾ ಇಲಾಖೆಯವರು ಇದಕ್ಕೆ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು. ಮಧುಗಿರಿ ಬೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್ ಜಗದೀಶ್ ಮಾತನಾಡಿ, ರಾಜ್ಯದ ಪ್ರತಿಯೊಂದು ಕುಟುಂಬಕ್ಕೆ 200 ಗರಿಷ್ಠ ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆ ಅನುಷ್ಠಾನಕ್ಕೆ ಇಲಾಖೆಯು ಕಾರ್ಯಪ್ರವೃತ್ತವಾಗಿದೆ. ಯಾವುದೇ ರೀತಿಯ ತೊಂದರೆ ಎದುರಾದರೆ ಬೆಸ್ಕಾಂ ಸಹಾಯವಾಣಿ ಸಂಪರ್ಕಿಸುವಂತೆ ತಿಳಿಸಿದರು.