Shivamogga: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ವಿದ್ಯಾರ್ಥಿ ಬಲಿ

ಸಾಮಾನ್ಯ ದಿನದಂತೆ ಬೆಳಗ್ಗೆ ಎದ್ದು ಮನೆಯಿಂದ ಶಾಲೆಗೆ ತೆರಳಲು ಸಿದ್ಧನಾಗುತ್ತಿದ್ದ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

Shivamogga Another student died of heart attack in the state sat

ಶಿವಮೊಗ್ಗ (ಜ.11): ಸಾಮಾನ್ಯ ದಿನದಂತೆ ಬೆಳಗ್ಗೆ ಎದ್ದು ಮನೆಯಿಂದ ಶಾಲೆಗೆ ತೆರಳಲು ಸಿದ್ಧನಾಗುತ್ತಿದ್ದ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಜಯಂತ್ ರಜತಾದ್ರಯ್ಯ (16) ಮೃತಪಟ್ಟ ಬಾಲಕನೆಂದು ಗುರುತಿಸಲಾಗಿದೆ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದನು. ಎಣ್ಣೆಕೊಪ್ಪ ಗ್ರಾಮದ ಈತ ಮುಂಜಾನೆ ತರಗತಿಗೆ ಹೊರಡಲೆಂದು ಅಣಿಯಾಗುತ್ತಿದ್ದ ವೇಳೆಯಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಈತನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಈ ಸಂಬಂಧ ಸೊರಬ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದೀಗ ಗ್ರಾಮದಲ್ಲಿ ಶೋಕದ ವಾತಾವರಣ ಮೂಡಿದ್ದು ಎಳೆಯ ವಯಸ್ಸಿನ ಬಾಲಕ ಅಕಾಲಿಕ ನಿಧನನಾಗಿದ್ದು ಎಲ್ಲರಲ್ಲೂ ಬೇಸರ ಮೂಡಿಸಿದೆ.

Kodagu: ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿ ಬಲಿ

ಶ್ವಾಸಕೋಶ ಸಮಸ್ಯೆಗೆ ಮತ್ತೊಬ್ಬ ವಿದ್ಯಾರ್ಥಿ ಬಲಿ:
ಇತ್ತೀಚಿಗೆ ಶಿವಮೊಗ್ಗದ ಪುರದಾಳ್ ಗ್ರಾಮದ 10ನೇ ತರಗತಿ ಬಾಲಕ ಸುಮನ್ (16) ಶ್ವಾಸಕೋಶದ ಸೋಂಕಿನಿಂದ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ  ಮತ್ತೊಬ್ಬ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೊರಬ  ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದ 10ನೇ ತರಗತಿಯ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ದುರ್ದೈವಿ ಆಗಿದ್ದಾನೆ.  ಜಯಂತ್ ಎಂದಿನಂತೆ ಬೆಳಗ್ಗೆ ಎದ್ದು ಇಂದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿತ್ತು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ರಾಜ್ಯದಲ್ಲಿ ಶಾಲಾ ಮಕ್ಕಳಲ್ಲಿ ಹೃದಯಾಘಾತ ಸೇರಿದಂತೆ ವಿವಿಧ ಖಾಯಿಲೆಗಳಿಂದ ಬಳಲಿ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನುವುದು ಆತಂಕಕಾರಿ ವಿಚಾರ ಆಗಿದೆ.

ಪುರದಾಳು ಗ್ರಾಮದಲ್ಲಿ ಸುಮನ್‌ ಅಂತ್ಯಕ್ರಿಯೆ: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ನಡೆದಿತ್ತು. ಸುಮನ್(16) ಮೃತಪಟ್ಟ ಯುವಕ. ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದ ಶ್ರೀಕಾಂತ್ ಮತ್ತು ನೇತ್ರಾ ದಂಪತಿಯ ಪುತ್ರನಾಗಿದ್ದ ಸುಮನ್ ಕಳೆದ ಹದಿನೈದು ದಿನಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದನು. ಪ್ರಾರಂಭದಲ್ಲಿ ಮಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಆಸ್ಪತ್ರೆ ವೈದ್ಯರು ಬೆಂಗಳೂರಿನಲ್ಲಿ  ಹೆಚ್ಚಿನ ಚಿಕಿತ್ಸೆ ಕೊಡಿಸುವಂತೆ ಸೂಚಿಸಿದ್ದರು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ವಾರದಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಸುಮನ್  ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಪುತ್ರನನ್ನು ಕಳೆದುಕೊಂಡ ಕುಟುಂಬದಲ್ಲಿ ದುಃಖದಲ್ಲಿದೆ.ಮೃತ ಯುವಕನಿಗೆ ಊರಿನ ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ. ಸ್ವಗ್ರಾಮ ಪುರದಾಳು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

Mandya: ನಾಟಕ ಮಾಡುವ ವೇಳೆಯೆ ಹೃದಯಘಾತದಿಂದ ಕುಸಿದು ಬಿದ್ದು ಪ್ರಾಣಬಿಟ್ಟ ಕಲಾವಿದ!

ಮೂರು ದಿನದ ಹಿಂದೆ 6ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು: ಕೊಡಗಿನ ಕೂಡುಮಂಗಳೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಮಂಜಾಚಾರಿ ಎಂಬುವರ ಪುತ್ರ ಕೀರ್ತನ್ (12) ಹೃದಯಾಘಾತದಿಂದ ಮೃತಪಟ್ಟ ಬಾಲಕ ಆಗಿದ್ದನು. ಕುಶಾಲನಗರದ ಭಾರತ್ ಮಾತಾ ಶಾಲೆಯಲ್ಲಿ ಮೃತ ಕೀರ್ತನ್‌ 6ನೇ ತರಗತಿ ಅಭ್ಯಾಸ ಮಾಡುತ್ತಿದ್ದನು. ಆದರೆ, ದುರ್ದೈವ ಎಂದರೆ ಅತಿ ಚಿಕ್ಕ ವಯಸ್ಸಿಗೆ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿತ್ತು.

Latest Videos
Follow Us:
Download App:
  • android
  • ios