ಶಿವಮೊಗ್ಗ(ಸೆ.24):  ಪ್ರಧಾನಿ ನರೇಂದ್ರ ಮೋದಿ ಅವರ 'ಹೌಡಿ ಮೋದಿ' ಕಾರ್ಯಕ್ರಮ ಬರೀ ಬೂಟಾಟಿಕೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್. ಎಸ್ ಸುಂದರೇಶ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಹರಿಹಾಯ್ದಿದ್ದಾರೆ.

ಮೋದಿಯವರಿಗೆ ಭಾರತದಲ್ಲಿ ಸಭೆ ನಡೆಸಲು, ಬಡವರ ಪರ ಮಾತನಾಡಲು ಆಗುವುದಿಲ್ಲ. ಅಮೆರಿಕದಲ್ಲಿ ಸಭೆ ನಡೆಸುತ್ತಾರೆ. ಇದು ಕೂಡ ಅಮೆರಿಕಾದಲ್ಲಿ ನಡೆಯುವ ಮುಂದಿನ ಚುನಾವಣೆಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಅನುಕೂಲವಾಗಲೆಂದೇ ಸಭೆ ಆಯೋಜಿಸಲಾಗಿದೆಯೇ ಹೊರತು ಬೇರೇನೂ ಇಲ್ಲ. ಭಾರತದ ಜನ ಬಡವರಾಗಿ ಒಪ್ಪತ್ತಿನ ಊಟಕ್ಕೂ ಕಷ್ಟಪಡುತ್ತಿದ್ದರೆ, ಪ್ರಧಾನಿ ಮೋದಿ ವಿಜೃಂಭಣೆಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ಟೀಕಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಉದ್ಯಮಿಗಳಿಗೆ ಅನುಕೂಲ:

ದೇಶದ ಆರ್ಥಿಕ ಪರಿಸ್ಥಿತಿ ದಿನ ದಿಂದ ದಿನಕ್ಕೆ ಕುಸಿಯುತ್ತಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಬಿಜೆಪಿಗೆ ಮತ ನೀಡಿದ ಯುವಕರು ಕಂಗಾಲಾಗಿದ್ದಾರೆ. ಮಧ್ಯಮವರ್ಗದವರಿಗೆ ಅನುಕೂಲ ಕಲ್ಪಿಸುವಂತೆ ತೆರಿಗೆ ಇಳಿಸುವುದು ಬಿಟ್ಟು ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ಸಂಬಂಧ ತೆರಿಗೆ ಇಳಿಸಿದ್ದಾರೆ ಎಂದು ಆಪಾದಿಸದರು.

ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಮಾತನಾಡಿ, ಶಿವಮೊಗ್ಗ ನಗರದ ಪರಿಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ಸಂತ್ರಸ್ತರ ಗೋಳು ಮುಗಿದಿಲ್ಲ. ಸಚಿವ ಕೆ. ಎಸ್. ಈಶ್ವರಪ್ಪಗೆ  ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸುವುದೊಂದನ್ನು ಬಿಟ್ಟು ಬೇರೆ ಕೆಲಸವೇ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ : 2 ಸಾವಿರಕ್ಕೂ ಹೆಚ್ಚು ನಿವೇಶನ ಹಂಚಿಕೆ

ರಾಜ್ಯದಲ್ಲಿನ ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಸ್ಪಂದನೆ ನೀಡುವಲ್ಲಿ ಹಾಗೂ ಪರಿಹಾರ ವಿತರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ಸೆ.೨೪ ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು.

ಅನರ್ಹ ಶಾಸಕರ ಪರ ಬ್ಯಾಟಿಂಗ್‌ಗೆ ಸಮಯ ವ್ಯರ್ಥ ಮಾಡುತ್ತಿರುವ ಸಿಎಂ ಯಡಿಯೂರಪ್ಪ ಅವರು ನೆರೆ ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯ ವೈಖರಿ ಖಂಡಿಸಿ ಪ್ರತಿಭಟನೆ ಆಯೋಜಿಸಲಾಗಿದೆ. ಮುಖಂಡರಾದ ದಿನೇಶ್ ಗುಂಡೂ ರಾವ್, ಮಾಜಿ ಸಿಎಂ ಸಿದ್ದ ರಾಮಯ್ಯ, ಮಾಜಿ ಡಿಸಿಎಂ ಜಿ. ಪರ ಮೇಶ್ವರ್ ಸೇರಿ ಹಲವರು ಭಾಗವಹಿಸಲಿ ದ್ದಾರೆ ಎಂದರು. ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಪುನರ್ವಸತಿ ಹಾಗೂ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದ ಅವರು, ಜಿಲ್ಲೆಯ ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.