ಶಿವಮೊಗ್ಗ: ಆ.14, 15ರಂದು ಶಾಲೆಗಳಿಗೆ ರಜೆ
ಭಾರೀ ಮಳೆ ಮತ್ತು ನೆರೆಯ ಹಿನ್ನೆಲೆಯಲ್ಲಿ ಆ. 14 ಮತ್ತು ಆ. 15 ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಕಳೆದ ಮಂಗಳವಾರ ಅಂದರೆ ಆ. 6 ರಿಂದ ಶಾಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾರಂಭಿಸಿದ್ದು, ಇದನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ.
ಶಿವಮೊಗ್ಗ(ಆ.14): ಭಾರೀ ಮಳೆ ಮತ್ತು ನೆರೆಯ ಹಿನ್ನೆಲೆಯಲ್ಲಿ ಆ. 14 ಮತ್ತು ಆ. 15 ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಆದರೆ ಈ ರಜೆಯು ಕೇಂದ್ರೀಯ ವಿದ್ಯಾಲಯಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ. ಕಳೆದ ಮಂಗಳವಾರ ಅಂದರೆ ಆ. 6 ರಿಂದ ಶಾಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾರಂಭಿಸಿದ್ದು, ಇದನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಇದೀಗ ಮಳೆ ಕಡಿಮೆಯಾಗಿದ್ದರೂ, ನೆರೆ ಮತ್ತು ಸಂಕಟದ ಭೀತಿ ತಪ್ಪಿಲ್ಲ. ನೆರೆಯಿಂದ ಇನ್ನೂ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ರಸ್ತೆ, ಸೇತುವೆಗಳು ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ: ಸಂಚಾರಿ ಆರೋಗ್ಯ ಘಟಕದಲ್ಲಿ ನಕಲಿ ವೈದ್ಯರು