ಶಿವಮೊಗ್ಗದ ಪ್ರಸಿದ್ಧ ಚಂದ್ರಗುತ್ತಿ ರೇಣುಕಾ ಎಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ನಿಷೇಧ ಹೇರಿ  ಜಿಲ್ಲಾಧಿಕಾರಿ ಶಿವಕುಮಾರ್ ಆದೇಶ ನೀಡಿದ್ದಾರೆ. 

ಶಿವಮೊಗ್ಗ (ಮಾ.17):  ಚಂದ್ರಗುತ್ತಿ ರೇಣುಕಾ ಎಲ್ಲಮ್ಮ ದೇವಿಯ ಜಾತ್ರೆಗೆ ನಿಷೇಧ ಹೇರಿ ಜಿಲ್ಲಾಡಳಿತ ಆದೇಶ ನೀಡಿದೆ. 

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಚಂದ್ರಗುತ್ತಿಯ ರೇಣುಕಾ ಎಲ್ಲಮ್ಮ ದೇವಿಯ ಜಾತ್ರೆ ಮಹೋತ್ಸವಲ್ಲೆ ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ, ಹೊರಗಿನ ಭಕ್ತರಿಗೆ ಪ್ರವೇಶ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ. 

ಕಾರ್ಣಿಕಕ್ಕೆ ಮುನ್ನವೇ ಕಳಚಿ ಬಿದ್ದ ತ್ರಿಶೂಲ, ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿ ಅಪಶಕುನ.? ...

ದೇಗುಲದ ಆಡಳಿತ ಮಂಡಳಿಗೆ ಧಾರ್ಮಿಕ ವಿಧಿ ವಿಧಾನಗಳು, ಪೂಜೆ ಸಲ್ಲಿಸಲು ಮಾತ್ರ ಅವಕಾಶ ನೀಡಿ ಜಿಲ್ಲಾಧಿಕಾರಿ ಶಿವಕುಮಾರ್ ಆದೇಶ ನೀಡಿದ್ದಾರೆ. 

ಮಾರ್ಚ್ 19 ರಿಂದ ಮಾರ್ಚ್ 25 ರವರೆಗೆ ಚಂದ್ರಗುತ್ತಿ ರೇಣುಕಾ ಎಲ್ಲಮ್ಮ ದೇಗುಲದಲ್ಲಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ ಮಾಡಲಾಗಿತ್ತು. ಇದೀಗ ಜಾತ್ರೆ, ರಥೋತ್ಸವಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.