2 ಗಂಟೆಗಳೊಳಗಾಗಿ ಹೊರ ಜಿಲ್ಲೆಗೆ ತೆರಳಲು ಒನ್‌ವೇ ಪಾಸ್‌: ಶಿವಮೊಗ್ಗ ಜಿಲ್ಲಾಧಿಕಾರಿ

ಹೊರ ಜಿಲ್ಲೆಗಳಿಗೆ ತೆರಳುವವರು ಬಸ್‌ ಸೌಲಭ್ಯ ಬಯಸಿದರೆ ಕಲ್ಪಿಸಬೇಕು. ಯಾವುದಾದರೂ ಒಂದು ಊರಿಗೆ ಒಂದು ಬಸ್‌ನಲ್ಲಿ ಪ್ರಯಾಣಿಸುವಷ್ಟು ಜನರಿಂದ ವಿನಂತಿ ಬಂದರೆ, ಕೆಎಸ್‌ಆರ್‌ಟಿಸಿ ಅಧಿ​ಕಾರಿಗಳಿಗೆ ಮಾತನಾಡಿ ಬಸ್‌ ವ್ಯವಸ್ಥೆ ಮಾಡಿ ಅರ್ಜಿದಾರರಿಗೆ ಮಾಹಿತಿ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ. 

Shivamogga DC Shivakumar instruct officials to issue One Way Pass For Inter District Travel

ಶಿವಮೊಗ್ಗ(ಮೇ.06): ಹೊರ ಜಿಲ್ಲೆಗಳಿಗೆ ತೆರಳುವವರಿಗೆ ಅರ್ಜಿ ಸಲ್ಲಿಸಿದ ಎರಡು ಗಂಟೆ ಒಳಗಾಗಿ ಒನ್‌ ವೇ ಪಾಸ್‌ ಪಾಸ್‌ ವಿತರಿಸಬೇಕು ಎಂದು ಜಿಲ್ಲಾ​ಧಿಕಾರಿ ಕೆ.ಬಿ. ಶಿವಕುಮಾರ್‌ ತಹಸೀಲ್ದಾರ್‌ಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ತಾಲೂಕು ಮಟ್ಟದ ಅಧಿ​ಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ​ರೆನ್ಸ್‌ ಸಂದರ್ಭದಲ್ಲಿ ಈ ಕುರಿತು ಸೂಚನೆಗಳನ್ನು ನೀಡಿದರು. ಅರ್ಜಿಯಲ್ಲಿ ಮೊಬೈಲ್‌ ಸಂಖ್ಯೆ ಸೇರಿ ಕನಿಷ್ಠ ಮಾಹಿತಿ ಮಾತ್ರ ಪಡೆಯಬೇಕು. ಜನರನ್ನು ಕಾಯಿಸದೆ ನೇರವಾಗಿ ಅರ್ಜಿಯನ್ನು ಸ್ವೀಕರಿಸಬೇಕು. ಒಂದು ವೇಳೆ ಪಾಸ್‌ ನೀಡಲು ಸಾಧ್ಯವಿಲ್ಲದಿದ್ದರೆ ಅರ್ಜಿ ಸ್ವೀಕರಿಸುವ ಸಂದರ್ಭದಲ್ಲಿಯೇ ತಿಳಿಸಬೇಕು. ಅರ್ಜಿಗಳನ್ನು ತಹಸೀಲ್ದಾರ್‌ ಕಚೇರಿಯಲ್ಲಿ ಸ್ವೀಕರಿಸಬೇಕು. ಪಾಸ್‌ಗಳನ್ನು ಮೊಬೈಲ್‌ ಸಂಖ್ಯೆ ತಿಳಿಸಿ ನಾಡ ಕಚೇರಿಯಲ್ಲಿ ಪಡೆಯಬೇಕು ಎಂದು ವಿವರಿಸಿದರು.

ರಾಜ್ಯದ ಮೊದಲ ಕೊರೋನಾ ಸೋಂಕಿತ ಪೇದೆ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಹೊರ ಜಿಲ್ಲೆಗಳಿಗೆ ತೆರಳುವವರು ಬಸ್‌ ಸೌಲಭ್ಯ ಬಯಸಿದರೆ ಕಲ್ಪಿಸಬೇಕು. ಯಾವುದಾದರೂ ಒಂದು ಊರಿಗೆ ಒಂದು ಬಸ್‌ನಲ್ಲಿ ಪ್ರಯಾಣಿಸುವಷ್ಟುಜನರಿಂದ ವಿನಂತಿ ಬಂದರೆ, ಕೆಎಸ್‌ಆರ್‌ಟಿಸಿ ಅಧಿ​ಕಾರಿಗಳಿಗೆ ಮಾತನಾಡಿ ಬಸ್‌ ವ್ಯವಸ್ಥೆ ಮಾಡಿ ಅರ್ಜಿದಾರರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಮಾಹಿತಿ ಕಡ್ಡಾಯ:

ಜಿಲ್ಲೆಯ ಎಪಿಎಂಸಿ ಸೇರಿದಂತೆ ಕೈಗಾರಿಕಾ ವಲಯಗಳಿಗೆ ಹೊರ ರಾಜ್ಯಗಳಿಂದ ಲಾರಿಗಳಲ್ಲಿ ಆಗಮಿಸುವವರ ಸಂಪೂರ್ಣ ವಿವರಗಳನ್ನು ಪಡೆಯಬೇಕು. ಹೊರ ರಾಜ್ಯಗಳಿಂದ ಲಾರಿಗಳಲ್ಲಿ ಅನ​ಧಿಕೃತವಾಗಿ ಯಾರೂ ಜಿಲ್ಲೆ ಪ್ರವೇಶಿಸುವಂತಿಲ್ಲ. ಎಪಿಎಂಸಿಗಳಿಗೆ ಆಗಮಿಸುವ ಲಾರಿಗಳ ಚಾಲಕರ ವಿವರ, ಒಂದು ವೇಳೆ ಹಮಾಲಿಗಳು ಆಗಮಿಸಿದ್ದರೆ ಅವರ ವಿವರ, ಆಗಮಿಸಿದ ಹಾಗೂ ಹಿಂತಿರುಗುವ ದಿನಾಂಕ ಇತ್ಯಾದಿಗಳನ್ನು ಎಪಿಎಂಸಿ ಕಾರ್ಯದರ್ಶಿಗಳು ಪಡೆದು ಪೊಲೀಸರಿಗೆ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ಲಾರಿಯಲ್ಲಿ ಆಗಮಿಸುವವರು ಎಪಿಎಂಸಿ ಆವರಣದ ಹೊರಗೆ ಅಡ್ಡಾಡುವಂತಿಲ್ಲ. ಇದನ್ನು ಉಲ್ಲಂಘಿಸಿದರೆ ಸಂಬಂಧಪಟ್ಟಸಗಟು ಡೀಲರ್‌ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಅನಾವಶ್ಯ ಹೊರ ಬರಬೇಡಿ:

ಲಾಕ್‌ಡೌನ್‌ ಸಡಿಲಿಕೆ ಮಾಡಿದ್ದರೂ, ಸಾರ್ವಜನಿಕರು ಅಗತ್ಯ ಸಂದರ್ಭಗಳಲ್ಲಿ ಮಾತ್ರ ಮನೆಯಿಂದ ಹೊರಗೆ ಬರಬೇಕು. ಅಗತ್ಯ ಸಾಮಗ್ರಿಗಳನ್ನು ಮನೆಯ ಸಮೀಪದಲ್ಲೇ ಖರೀದಿಸಬೇಕು. ಯಾವುದೇ ಅಂಗಡಿಗಳ ಮುಂದೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ವ್ಯಾಪಾರ ನಡೆಸುತ್ತಿದ್ದರೆ, ಅಂತಹ ಅಂಗಡಿ ಮಾಲೀಕರಿಗೆ ದಂಡ ವಿ​ಸುವಂತೆ ಜಿಲ್ಲಾ​ಧಿಕಾರಿ ಅವರು ತಿಳಿಸಿದರು.

ಸೆಲೂನ್‌ ಅವಕಾಶ:

ಜಿಲ್ಲೆಯಲ್ಲಿ ಸೆಲೂನ್‌ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಕಡ್ಡಾಯವಾಗಿ ಮಾಸ್ಕ್‌ ಮತ್ತು ಕೈಗವಸು ಸೇರಿದಂತೆ ಎಲ್ಲಾ ಅಗತ್ಯ ಮುಂಜಾಗರೂಕತೆ ವಹಿಸಿರಬೇಕು ಎಂದರು. ಈ ಸಂದರ್ಭದಲ್ಲಿ ಪೊಲೀಸ್‌ ವರಿಷ್ಠಾ​ಕಾರಿ ಕೆ.ಎಂ.ಶಾಂತರಾಜು ಮತ್ತಿತರರು ಉಪಸ್ಥಿತರಿದ್ದರು.
 

Latest Videos
Follow Us:
Download App:
  • android
  • ios