ಶಿವಮೊಗ್ಗ: ಹಬ್ಬ ಆಚರಣೆಯಲ್ಲಿ ಡಿಜೆ, ಬೈಕ್ ರ‍್ಯಾಲಿಗಿಲ್ಲ ಅವಕಾಶ

ಗಣೇಶ ಹಬ್ಬದ ನೆಪದಲ್ಲಿ ಡಿಜೆ ಹಾಕಿ ಕುಣಿದು, ಬೈಕ್ ರ‍್ಯಾಲಿ ಮಾಡಬೇಕೆಂದಿದ್ದವರಿಗೆ ಶಿವಮೊಗ್ಗ ಡಿಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಹಬ್ಬ ಆಚರಣೆ ಸಂದರ್ಭ ಡಿಜೆ ಹಾಕುವಂತಿಲ್ಲ, ಬೈಕ್ ರ‍್ಯಾಲಿ ಮಾಡುವಂತಿಲ್ಲ ಎಂದು ಡಿಸಿ ಶಿವಕುಮಾರ್‌ ತಾಕೀತು ಮಾಡಿದ್ದಾರೆ.

Shivamogga dc strictly prohibits bike rally and dj music in Ganesha Festival

ಶಿವಮೊಗ್ಗ(ಆ.31): ಗಣೇಶ ಹಬ್ಬವನ್ನು ಸುರಕ್ಷತೆ ಮತ್ತು ಶಾಂತಿಯುತವಾಗಿ ಆಚರಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಡಿಜೆ, ಬೈಕ್‌ ರಾರ‍ಯಲಿಗಳನ್ನು ನಿಷೇಧಿಸಿದೆಯಲ್ಲದೆ, ಇನ್ನಿತರೆ ಹಲವಾರು ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಸೂಚನೆ ಹೊರಡಿಸಿದೆ.

ಸೆ. 2 ರಂದು ಗಣೇಶ ಹಬ್ಬ ಆಚರಣೆ ಮತ್ತು ಸೆ. 10 ರಂದು ಮೊಹರಂ ಹಬ್ಬ ಆಚರಣೆಗಳು ಜಿಲ್ಲೆಯಾದ್ಯಂತ ನಡೆಯಲಿದ್ದು, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆ. 2 ರಿಂದ ಸೆ. 15 ರವರೆಗೆ ಜಿಲ್ಲೆಯಾದ್ಯಂತ ಬೈಕ್‌ ರಾರ‍ಯಲಿ ನಿಷೇಧಿಸಿ ಜಿಲ್ಲಾಧಿಕಾರಿ ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

2 - 3 ದಿನ ಕರಾವಳಿ, ಮಲೆನಾಡಲ್ಲಿ ಹೆಚ್ಚಿನ ಮಳೆ

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ ವಿಸರ್ಜನೆಯನ್ನು ಮೆರವಣಿಗೆ ಮೂಲಕ ತೆಗೆದು, ಹೊಳೆ, ನದಿ, ಕೆರೆಗಳು, ಹಿನ್ನೀರು ಪ್ರದೇಶಗಳಲ್ಲಿ ತೆಪ್ಪದ ಮೂಲಕ ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದಲ್ಲಿ ಕೇವಲ ಮೂರರಿಂದ ನಾಲ್ಕು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಶ ನೀಡಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಡ್ಡಾಯವಾಗಿ ಲೈಫ್‌ ಜಾಕೇಟ್‌, ನುರಿತ ಈಜುಗಾರರು ಇದ್ದು ಗಣಪತಿ ಮೂರ್ತಿ ವಿಸರ್ಜನೆ ಮಾಡಬೇಕು ಎಂದು ಆದೇಶಿಸಿದ್ದಾರೆ. ಸೆ. 2ರಿಂದ ಗಣೇಶೋತ್ಸವ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ನಿಷೇಧಗೊಳಿಸಿ ಆದೇಶಿಸಿದ್ದಾರೆ.

Latest Videos
Follow Us:
Download App:
  • android
  • ios