ಜುಲೈ ಅಂತ್ಯಕ್ಕೆ ವಿಶಿಷ್ಟ ಮಾದರಿಯಲ್ಲಿ ಕುವೆಂಪು ವಿವಿ ಘಟಿಕೋತ್ಸವ

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಈ ಬಾರಿಯ ಘಟಿಕೋತ್ಸವವನ್ನು ಇನ್ ಹೌಸ್ ಮಾದರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

shivamogga kuvempu university 30th convention To Be held On July 28th are 29

ಶಿವಮೊಗ್ಗ,(ಜುಲೈ.10): ಇದೇ ಜುಲೈ 28 ಅಥವಾ 29ರಂದು ಇನ್ ಹೌಸ್ ಮಾದರಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಕುಲಪತಿ ಪ್ರೊ. ಬಿ ಪಿ ವೀರಭದ್ರಪ್ಪ, ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ನಡೆಸಲು ರಾಜ್ಯಪಾಲರು ಸಮ್ಮತಿಸಿದ್ದು, ಜಿಲ್ಲಾಧಿಕಾರಿಗಳು ಅನುಮತಿಸಿದಲ್ಲಿ ಇದೇ ಜುಲೈ 28 ಅಥವಾ 29ರಂದು ಆಂತರಿಕವಾಗಿ ಘಟಿಕೋತ್ಸವವನ್ನು ಆಯೋಜಿಸಲು ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಶಿವಮೊಗ್ಗದ ಕುವೆಂಪು ವಿವಿಗೆ ಮೊದಲ ಸ್ಥಾನ

ಜುಲೈ 09ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವ, ಈಗಾಗಲೇ ಕೋವಿಡ್-19ರ ಕಾರಣದಿಂದ ವಿಳಂಬವಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ರಾಜ್ಯಪಾಲ ವಜ್ಜುಭಾಯಿ ವಾಲಾ ಅವರು ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಘಟಿಕೋತ್ಸವ ಆಯೋಜಿಸಲು ಸಮ್ಮತಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಿಂಗಳ ಅಂತ್ಯದ ವೇಳೆಗೆ ಘಟಿಕೋತ್ಸವ ಆಯೋಜಿಸಲು ಸಿಂಡಿಕೇಟ್ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ. ಅನುಮತಿಗಾಗಿ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ಹೇಳಿದರು.

ಆಂತರಿಕ ಘಟಿಕೋತ್ಸವ 
ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅನುಮತಿಸಿದಲ್ಲಿ ಈ ಬಾರಿಯ ಘಟಿಕೋತ್ಸವವನ್ನು ಇನ್ ಹೌಸ್ ಮಾದರಿಯಲ್ಲಿ (ಆಂತರಿಕವಾಗಿ) ಆಯೋಜಿಸಲಾಗುವುದು ಎಂದು ತಿಳಿಸಿದರು. 

ಸುಮಾರು ಒಂದು ಸಾವಿರ ಸಭಿಕರು ಭಾಗವಹಿಸಬಹುದಾದ ವಿಶ್ವವಿದ್ಯಾಲಯದ ಹೊಸ ಘಟಿಕೋತ್ಸವ ಸಭಾಂಗಣದಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಂಡು ಸರ್ಕಾರದ ಮಾರ್ಗದರ್ಶಿ ಸೂತ್ರಗಳ ಅನ್ವಯ ಘಟಿಕೋತ್ಸವವನ್ನು ನಡೆಸಲಾಗುವುದು. ರ್ಯಾಂಕ್ ವಿಜೇತರು, ಪಿಎಚ್‍ಡಿ ಪದವೀಧರರು, ಗೌರವ ಡಾಕ್ಟರೇಟ್ ಪಡೆದವರು, ಸಿಂಡಿಕೇಟ್ ಸದಸ್ಯರು, ಶೈಕ್ಷಣಿಕ ಮಂಡಳಿ ಸದಸ್ಯರು ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿ ಒಳಗೊಂಡಂತೆ ಸುಮಾರು 500 ಮಂದಿ ಮಾತ್ರ ಭಾಗವಹಿಸಬಹುದಾಗಿದ್ದು, ಪೋಷಕರು ಮತ್ತು ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Latest Videos
Follow Us:
Download App:
  • android
  • ios