Asianet Suvarna News Asianet Suvarna News

Shivamogga ಅರಳುವ ಮುನ್ನವೇ ಕಮರಿದ ಮಲೆನಾಡಿನ ಹೂವು: 9ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು!

ಶಿವಮೊಗ್ಗದ ರಿಪ್ಪನ್‌ಪೇಟೆ ಪಟ್ಟಣದಲ್ಲಿ 9ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ.

Shivamogga ripponpet High School girl self death at balur village sat
Author
First Published Jan 10, 2024, 6:20 PM IST

ಶಿವಮೊಗ್ಗ (ಜ.10): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ರಿಪ್ಪನ್‌ಪೇಟೆ ಪಟ್ಟಣದಲ್ಲಿ 9ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ರಿಪ್ಪನ್‌ಪೇಟೆ ಪಟ್ಟಣದ  ಪ್ರೌಡಶಾಲೆಯಲ್ಲಿ 9ನೇ ತರಗತಿ ಓದುತಿದ್ದಳು. 15 ವರ್ಷದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡಿದ್ದಾಲೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್  ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತದೇಹವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

ಶಿಕ್ಷಣ ಸಚಿವರ ತವರು ಭದ್ರಾವತಿ ಶಾಲೆಯಲ್ಲೂ ಮಕ್ಕಳಿಂದ ಶೌಚಲಯ ಕ್ಲೀನ್‌: ಮುಖ್ಯ ಶಿಕ್ಷಕ ಸಸ್ಪೆಂಡ್‌

ಕಳೆದ ತಿಂಗಳು ಪಿಯು ವಿದ್ಯಾರ್ಥಿನಿ ಸಾವು:
ಡಿಸೆಂಬರ್ ತಿಂಗಳ 5ನೇ ತಾರೀಖಿನಂದು ಶಿವಮೊಗ್ಗ ಶಿವಮೊಗ್ಗ ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಆದಿಚುಂಚನಗಿರಿ ಪದವಿಪೂರ್ವ ಕಾಲೇಜಿನ ಕಟ್ಟಡದಿಂದ ಬಿದ್ದು ಪಿಯು ವಿದ್ಯಾರ್ಥಿನಿ ದಾರುಣ ಸಾವನ್ನಪ್ಪಿರುವ ದುರ್ಘಟನೆ ನಡೆದಿತ್ತು. ಮೃತ ವಿದ್ಯಾರ್ಥಿನಿ ದ್ವೀತಿಯ ಪಿಯು ಓದುತ್ತಿದ್ದ ಜಿ.ಒ.ಮೇಘಶ್ರೀ ಎನ್ನುವವಳಾಗಿದ್ದಾಳೆ. ಈಕೆ ದಾವಣಗೆರೆಯ ಚೆನ್ನಗಿರಿ ತಾಲೂಕಿನ ಚೆನ್ನಾಪುರ ಮೂಲದವಳಾಗಿದ್ದಳು. ಇದೇ ಕಾಲೇಜು ಹಾಸ್ಟೆಲ್‌ನಲ್ಲಿದ್ದು ಅಭ್ಯಾಸ ಮಾಡುತ್ತಿರುವ ಮೇಘಶ್ರೀ ಇಂದು ಕಾಲೇಜಿಗೆ ಬಯಾಲಜಿ ಪರೀಕ್ಷೆ ಬರೆಯಲು ಬಂದಿದ್ದಳು. ಆದರೆ, ಪರೀಕ್ಷೆ ನಡುವೆಯೇ ವಾಶ್ ರೂಂ ಹೋಗುವುದಾಗಿ ಹೇಳಿದ್ದಳು.

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 18 ವರ್ಷದ ಯುವತಿ ಬಲಿ: 2024ರಲ್ಲಿ ಮೊದಲ ಸಾವು

ವಿದ್ಯಾರ್ಥಿನಿ ಜೊತೆಗೆ ಸಿಬ್ಬಂದಿ ಹೋದರೂ ಕಣ್ತಪ್ಪಿಸಿ ಬಿದ್ದಳು: ಆಗ, ನಕಲು ಮಾಡುವುದರ ಮೇಲೆ ನಿಗಾವಹಿಸಿದ್ದ ಕಾಲೇಜು ಆಡಳಿತ ಮಂಡಳಿ ಒಬ್ಬರು ಕಾಲೇಜು ಸಿಬ್ಬಂದಿಯನ್ನು ಆಕೆಯೊಂದಿಗೆ ಕಳುಹಿಸಿದೆ. ಆದರೆ, ಪರೀಕ್ಷಾ ಕೊಠಡಿಯಿಂದ ಹೊರಬಂದ ಮೇಘಶ್ರೀ ನಮ್ಮ ಸಿಬ್ಬಂದಿಯ ಕಣ್ತಪ್ಪಿಸಿ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಕಾಲೇಜು ಸಿಬ್ಬಂದಿ ಹೇಳಿದ್ದಾರೆ. ಇನ್ನು ತೀವ್ರ ಗಾಯಗೊಂಡಿದ್ದ ಮೇಘಶ್ರೀ ಆಂಬುಲೆನ್ಸ್ ಬರುವ ಮೊದಲೇ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ. ಇನ್ನು ಘಟನೆ ಕುರಿತು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿತ್ತು.

Follow Us:
Download App:
  • android
  • ios