ಸಿಗಂದೂರು ಚೌಡೇಶ್ವರಿ ದೇಗುಲ ವಿವಾದ : ಭಾರೀ ವಿರೋಧ
ಪ್ರಖ್ಯಾತ ಸಿಗಂದೂರು ಚೌಡೇಶ್ವರಿ ದೇಗುಲದ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿದೆ. ವಿವಾದವು ಬಗೆಹರಿಯುವ ಲಕ್ಷಣಗಳು ಕಂಡು ಬರುತ್ತಿಲ್ಲ.
ಶಿವಮೊಗ್ಗ (ನ.03): ಸಿಗಂದೂರು ಚೌಡೇಶ್ವರಿ ದೇವಸ್ಥಾನ ಆಡಳಿತ ನಿರ್ವಹಣೆಗೆ ಜಿಲ್ಲಾಡಳಿತ ರಚಿಸಿರುವ ಮೇಲುಸ್ತುವಾರಿ ಸಮಿತಿಗೆ ಈಡಿಗ ಸಮಾಜ ವಿರೋಧ ವ್ಯಕ್ತಪಡಿಸಿದೆ.
ಸಮಿತಿ ವಿರೋಧಿಸಿ ಕ್ಷೇತ್ರದ ಧರ್ಮದರ್ಶಿ ರಾಮಪ್ಪ ಅವರು ಹೋರಾಟಕ್ಕೆ ಕರೆ ನೀಡಿದ ಬೆನ್ನಲ್ಲೇ ಈಡಿಗ ಸಮಾಜವು ಹೋರಾಟಕ್ಕೆ ಮುಂದಾಗಿದ್ದು, ಯಾವುದೇ ಕಾರಣಕ್ಕೂ ಸಿಗಂದೂರು ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸಲು ಸಮಾಜ ಬಿಡುವುದಿಲ್ಲ. ಸಿಗಂದೂರು ಕ್ಷೇತ್ರವನ್ನು ಈಗಿರುವಂತೆಯೇ ಉಳಿಸಿಕೊಳ್ಳಲು ಸರ್ಕಾರ ಸಹಕಾರ ನೀಡಬೇಕು ಎಂದು ಆಗ್ರಹಿಸಿದೆ.
ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ: ಹೋರಾಟದ ಎಚ್ಚರಿಕೆ ಕೊಟ್ಟ ಮಾಜಿ ಶಾಸಕ ..
ಆರ್ಯ ಈಡಿಗ ಭವನದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ನಡೆದ ಸಭೆಯು ಜಿಲ್ಲಾಡಳಿತದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಸರ್ಕಾರದ ಮಧ್ಯ ಪ್ರವೇಶವನ್ನು ಆಕ್ಷೇಪಿಸಿದ ಸಮಾಜದ ಮುಖಂಡರು ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿತು.