ಶಿವಮೊಗ್ಗ (ಜು. 05): ಕೊರೋನಾ ನಿಯಂತ್ರಣ ಕ್ರಮವಾಗಿ ಸಂಜೆ 6 ಗಂಟೆ ಬಳಿಕ ಅವಶ್ಯಕ ಸೇವೆಗಳನ್ನು ಹೊರತುಪಡಿಸಿ ಇತರ ವ್ಯಾಪಾರ ವಹಿವಾಟುಗಳನ್ನು ಶನಿವಾರದಿಂದ ನಿರ್ಬಂ​ಧಿಸಲಾಗಿದ್ದು, ಸಾರ್ವಜನಿಕರು 6 ಗಂಟೆಯ ಬಳಿಕ ರಸ್ತೆಗೆ ಇಳಿಯಬಾರದು ಎಂದು ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

ಕೊರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಎಲ್ಲಾ ಕ್ರಮಗಳಿಗೆ ಸಾರ್ವಜನಿಕರು ಇದುವರೆಗೆ ಸಹಕರಿಸಿದ್ದಾರೆ. ಆದರೆ ಕೆಲವು ದಿನಗಳಿಂದ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ಈ ಹಿನ್ನೆಲೆ ಜನರು ಒಂದೆಡೆ ಸೇರುವುದನ್ನು ತಪ್ಪಿಸುವ ಉದ್ದೇಶದಿಂದ ಎಲ್ಲರ ಸಲಹೆ ಪ್ರಕಾರ ಶಿವಮೊಗ್ಗದಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲೆಡೆ ರಾತ್ರಿ 8 ರಿಂದ ಕಫ್ರ್ಯೂ ಹಾಗೂ ಶಿವಮೊಗ್ಗದಲ್ಲಿ ಶನಿವಾರ ಸಂಜೆ 6 ಗಂಟೆಯಿಂದ ಜಾರಿಯಾಗಲಿದೆ ಎಂದು ಹೇಳಿದರು.

ಕೊರೋನಾ ಭಯ: ಪ್ರವಾ​ಸಿ​ಗರ ವಾಹನ ತಡೆದು ವಾಪಸ್‌ ಕಳು​ಹಿ​ಸಿದ ಗ್ರಾಮ​ಸ್ಥ​ರು

ಯಾವುದೇ ಕಾರಣಕ್ಕೂ ಒತ್ತಾಯದ ಲಾಕ್‌ಡೌನ್‌ ಜಾರಿಗೊಳಿಸುವುದಿಲ್ಲ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ್‌ ಧರಿಸದವರಿಗೆ ದಂಡ ವಿ​ಧಿಸಲು ಸೂಚಿಸಲಾಗಿದೆ ಎಂದರು.

ಸಲಹೆಗಳ ಮಹಾಪೂರ:

ಸಭೆಯಲ್ಲಿ ಒಟ್ಟು 42 ವಿವಿಧ ಸಂಘ ಸಂಸ್ಥೆಗಳ ಪ್ರತಿನಿ​ಗಳು ಭಾಗವಹಿಸಿ ಸಲಹೆಗಳನ್ನು ನೀಡಿದರು. ಸರ್ಕಾರ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಮದುವೆ, ಅಂತ್ಯಸಂಸ್ಕಾರಗಳಲ್ಲಿ ಮಾರ್ಗಸೂಚಿ ಉಲ್ಲಂಘನೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಎಲ್ಲಾ ಸರ್ಕಾರಿ ಕಚೇರಿಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್‌ ಇರಿಸಬೇಕು. ಖಾಸಗಿ ಬಸ್‌ ನಿಲ್ದಾಣದ ಶುಚಿತ್ವಕ್ಕೆ ಗಮನ ಹರಿಸಬೇಕು. ಹೊಟೇಲ್‌ ಮತ್ತು ಬೀದಿಬದಿ ತಿನಿಸು ವ್ಯಾಪಾರಸ್ಥರು ಒಮ್ಮೆ ಬಳಕೆ ಮಾಡುವ ಪ್ಲೇಟ್‌ಗಳನ್ನು ಕಡ್ಡಾಯವಾಗಿ ಇರಿಸಬೇಕು. ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಕಡಿವಾಣ ಹಾಕಬೇಕು. ಕ್ವಾರೆಂಟೈನ್‌ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಖಾತ್ರಿಪಡಿಸಿಕೊಳ್ಳಬೇಕು ಎಂದು ವಿವಿಧ ಸಂಘ ಸಂಸ್ಥೆಗಳ ಪ್ರತಿನಿ​ಗಳು ಸಲಹೆಗಳನ್ನು ನೀಡಿದರು.

ಜಿಲ್ಲಾ​ಧಿಕಾರಿ ಕೆ.ಬಿ.ಶಿವಕುಮಾರ್‌ ಮಾತನಾಡಿ, ಕೊರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಗೆ ಜನತೆ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ. ಇದೀಗ ಪಾಸಿಟಿವ್‌ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಸಂಪೂರ್ಣ ಲಾಕ್‌ಡೌನ್‌ ಕಾರ್ಯಸಾಧುವಲ್ಲ. ಆದರೆ ಸಾರ್ವಜನಿಕರು ವೈಯಕ್ತಿಕ ಶಿಸ್ತನ್ನು ಪಾಲಿಸುವ ಮೂಲಕ ಕರೋನಾ ನಿಯಂತ್ರಣ ಮಾಡಲು ಸಾಧ್ಯವಿದೆ ಎಂದರು.ಮೇಯರ್‌ ಸುವರ್ಣಾ ಶಂಕರ್‌, ಉಪ ಮೇಯರ್‌ ಸುರೇಖಾ ಮುರಳೀಧರ್‌, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್‌.ಅರುಣ್‌, ಜಿಲ್ಲಾ ಎಸ್ಪಿ ಶಾಂತರಾಜು, ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಜಿಪಂ ಸಿಇಒ ಎಂ.ಎಲ್‌.ವೈಶಾಲಿ, ಅಪರ ಜಿಲ್ಲಾ​ಕಾರಿ ಜಿ.ಅನುರಾಧ ಇತರರು ಇದ್ದರು.