ಶಿವಮೊಗ್ಗ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟಕ್ಕೆ ಕೊನೆಗೂ ಮುಹೂರ್ತ ಫಿಕ್ಸ್..!
ಆ. 31 ರಿಂದ ಶಿವಮೊಗ್ಗ ಬೆಂಗಳೂರು ಮಧ್ಯೆ ವಿಮಾನ ಹಾರಾಟ ಆರಂಭವಾಗಲಿದೆ. ಇಂಡಿಗೋ ಏರ್‌ಲೈನ್ಸ್ ಸಂಸ್ಥೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸೀಟ್ ಬುಕ್ಕಿಂಗ್‌ಗೆ ಇಂದಿನಿಂದಲೇ ಅವಕಾಶ ಕಲ್ಪಿಸಲಾಗಿದೆ.
ಶಿವಮೊಗ್ಗ(ಜು.27): ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಹೌದು, ಆ. 31 ರಿಂದ ಶಿವಮೊಗ್ಗ ಬೆಂಗಳೂರು ಮಧ್ಯೆ ವಿಮಾನ ಹಾರಾಟ ಆರಂಭವಾಗಲಿದೆ. ಇಂಡಿಗೋ ಏರ್‌ಲೈನ್ಸ್ ಸಂಸ್ಥೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸೀಟ್ ಬುಕ್ಕಿಂಗ್‌ಗೆ ಇಂದಿನಿಂದಲೇ ಅವಕಾಶ ಕಲ್ಪಿಸಲಾಗಿದೆ.
ಆ. 31ರಂದು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 9.50 ಕ್ಕೆ ಹೊರಟು 11.05 ಶಿವಮೊಗ್ಗ ತಲುಪಲಿದೆ. ನಂತರ 11:25ಕ್ಕೆ ಶಿವಮೊಗ್ಗದಿಂದ ಹೊರಟು 12:25ಕ್ಕೆ ಬೆಂಗಳೂರು ತಲುಪಲಿದೆ. ಆ. 31ರಂದು ಪ್ರತಿ ಟಿಕೆಟ್ ದರ 6227 ರೂ ಇರಲಿದ್ದು ಸೆಪ್ಟೆಂಬರ್ 1ರಿಂದ ಟಿಕೆಟ್ ದರ 4000 ರೂ. ಇರಲಿದೆ.
Shivamogga airport: ತನಿಖೆಗೂ ಮುನ್ನ ವಿಮಾನ ಹಾರಾಟ ಆರಂಭಿಸಲಿ: ಕೆ.ಎಸ್.ಈಶ್ವರಪ್ಪ
ಸೆಪ್ಟೆಂಬರ್ ಒಂದರಿಂದ ಪ್ರತಿ ದಿನ ಇದೇ ವೇಳೆಯಲ್ಲಿ ವಿಮಾನ ಸಂಚಾರ ನಡೆಸಲಿದೆ. ಪ್ರಯಾಣಿಕರು ಕೊಂಡೊಯ್ಯುವ ಲಗೇಜ್ ತೂಕಕ್ಕೆ ವಿಮಾನದಲ್ಲಿ ಮಿತಿ ಇರಲಿದೆ. ಶಿವಮೊಗ್ಗ-ಬೆಂಗಳೂರು ವಿಮಾನದಲ್ಲಿ 15 ತೂಕದ ಲಗೇಜ್ ಕೊಂಡೊಯ್ಯಬಹುದು. ಪ್ರತಿ ಪ್ರಯಾಣಿಕ ಒಂದು ಹ್ಯಾಂಡ್ ಬ್ಯಾಗ್ ತೆಗೆದುಕೊಂಡು ಹೋಗಬಹುದು. ತೂಕ 7 ಕೆ.ಜಿ.ವರೆಗೂ ಇರಬಹುದು. ಸುತ್ತಳತೆ 115 ಸೆಂ.ಮೀ. ಮೀರುವಂತಿಲ್ಲ ಎಂದು ಷರತ್ತು ವಿಧಿಸಲಾಗಿದೆ.
ಇಂಡಿಗೋ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ. ಶಿವಮೊಗ್ಗ-ಬೆಂಗಳೂರು ಮಧ್ಯೆ ವಿಮಾನ ಹಾರಾಟ ಯಾವಾಗ ಎಂಬ ಕುತೂಹಲವಿತ್ತು. ಇಂಡಿಗೋ ಸಂಸ್ಥೆ ಟಿಕೆಟ್ ಬುಕಿಂಗ್ ಆರಂಭಿಸಿದ್ದು ಇದರಿಂದ ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತ ನಿರೀಕ್ಷೆ ಹೆಚ್ಚಾಗಿದೆ.