ಭೀಮಾತೀರದಲ್ಲಿ ಮತ್ತೊಮ್ಮೆ ಗುಂಡಿನ ಮೊರೆತ ಕೇಳಿಬಂದಿದೆ. ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿಓರ್ವ ಮೃತಪಟ್ಟಿದ್ದಾನೆ.
ವಿಜಯಪುರ, [ಫೆ.17]: ಜಿಲ್ಲೆಯ ಇಂಡಿ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಭಾನುವಾರ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅರ್ಜುನ್ ಡೊಳ್ಳಿ (52) ಮೃತ. ಇಂಡಿ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಈ ದಾಳಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೊದಲಿಗೆ ಈತನ ಮೇಲೆ ಗುಂಡಿನ ದಾಳಿ ನಡೆಸಿರುವ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.
ಈ ಬಗ್ಗೆ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರು ದಾಳಿಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ತರಹದ ಹತ್ಯೆ ಇದೇ ಮೊದಲಲ್ಲ. ಈ ಹಿಂದೆ ಹಲವು ಶೂಟೌಟ್ ಗಳಾಗಿರುವ ಪ್ರಕರಣಗಳು ಇವೆ.
